ರಾಯಚೂರು | ಪ್ರಚೋದನಕಾರಿ ಭಾಷಣ ಪ್ರಕರಣ: ಶ್ರೀರಾಮಸೇನೆ ಜಿಲ್ಲಾ ಸಂಚಾಲಕ ಸೇರಿ ಇಬ್ಬರ ಬಂಧನ

Update: 2022-04-17 15:19 GMT

ರಾಯಚೂರು: ಪ್ರಚೋದನಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಶ್ರೀರಾಮಸೇನೆ ಜಿಲ್ಲಾ ಸಂಚಾಲಕ ಸೇರಿ ಇಬ್ಬರು ಆರೋಪಿಗಳನ್ನು ನಗರದ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಾದ ಶ್ರೀರಾಮಸೇನೆ ಜಿಲ್ಲಾ ಸಂಚಾಲಕ ರಾಜಾಚಂದ್ರ ರಾಮನಗೌಡ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ್ ಬಾವಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಎಪ್ರಿಲ್ 10 ರಂದು ರಾಮನವಮಿ ಹಿನ್ನೆಲೆ ಶ್ರೀರಾಮಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿ 'ಲವ್ ಕೇಸರಿ' ಟ್ರೆಂಡ್ ಸೃಷ್ಟಿಸಲು ಕರೆ ನೀಡಿದ್ದಲ್ಲದೆ, ವೇದಿಕೆ ಮೇಲೆ ಖಡ್ಗ ಹಿಡಿದು ಶ್ರೀರಾಮಸೇನೆ ಮುಖಂಡರು ಪ್ರಚೋದಿಸಿದ್ದರು. 

ಈ ಸಂಬಂಧ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಗೋವಾದಲ್ಲಿ ಬಂಧಿಸಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News