×
Ad

ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ: ಸಿದ್ದರಾಮಯ್ಯ, ಡಿಕೆಶಿ ಸಹಿತ ಹಲವರ ವಿರುದ್ಧ ಎಫ್ ಐಆರ್

Update: 2022-04-18 11:23 IST
ಎ.13ರಂದು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು (File Photo)

ಬೆಂಗಳೂರು, ಎ.18: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪರ ರಾಜೀನಾಮೆ, ಬಂಧನಕ್ಕೆ ಆಗ್ರಹಿಸಿ ಎ.13ರಂದು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಹೈ ಗ್ರೌಂಡ್ ಠಾಣೆ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.

ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್​ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಸೇರಿದಂತೆ ಒಟ್ಟು 36 ಕಾಂಗ್ರೆಸ್​ ನಾಯಕರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ರೇಸ್ ಕೋರ್ಸ್ ರಸ್ತೆಯ ರೇಸ್ ವ್ಯೂ ಹೋಟೆಲ್ ಬಳಿ ಅನುಮತಿ ಇಲ್ಲದೇ, ಅಕ್ರಮ ಕೂಟ ಸೇರಿ, ಸಂಚಾರಕ್ಕೆ ಅಡ್ಡಿಪಡಿಸಿ ಪತ್ರಿಭಟನೆ ನಡೆಸಿದ್ದ ಆರೋಪದಡಿ‌ ಕಾಂಗ್ರೆಸ್ ನಾಯಕರ ವಿರುದ್ಧ ಐಪಿಸಿ ಸೆಕ್ಷನ್​ 143, 341 ಅಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ ಎಂದು ತಿಳಿದುಬಂದಿದೆ.

ಎ.13ರಂದು ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನ ಕೆಲವು ನಾಯಕರನ್ನು  ಸಿಎಂ ನಿವಾಸದ ಬಳಿ  ಪೊಲೀಸರು ವಶಕ್ಕೆ ಪಡೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News