ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಆರೋಪ: ಕಲಬುರಗಿ ಬಿಜೆಪಿ ನಾಯಕಿಯ ಪತಿಯ ಬಂಧನ
ಕಲಬುರಗಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ನಾಯಕಿ ದಿವ್ಯಾ ಹಾಗರಗಿ ಅವರ ಪತಿಯನ್ನು ಸಿಐಡಿ ತಂಡ ಬಂಧಿಸಿದೆ.
ರವಿವಾರ ದಿವ್ಯಾ ಹಾಗರಗಿ ಮನೆಗೆ ಭೇಟಿ ನೀಡಿದ್ದ ಸಿಐಡಿ ತಂಡ, ತನಿಖೆಗೆ ಅಸಹಕಾರ ಹಾಗೂ ಆರೋಪಿಗಳ ನಾಪತ್ತೆಗೆ ಬೆಂಬಲ ನೀಡುತ್ತಿದ್ದಾರೆಂಬ ಆರೋಪದಲ್ಲಿ ಹಾಗರಗಿ ಪತಿ ರಾಜೇಶ್‌ರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ... ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಆರೋಪ: ಕಲಬುರಗಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಮನೆಗೆ ಸಿಐಡಿ ದಾಳಿ
ಹಾಗರಗಿಗೆ ಸೇರಿದ್ದ ಜ್ಞಾನಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೇ ಶಾಲೆಯ ಮೂವರು ಮಹಿಳಾ ಕೊಠಡಿ ಮೇಲ್ವಿಚಾರಕರು, ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದ ಮೂವರು ಅಭ್ಯರ್ಥಿಗಳು ಸೇರಿ ಒಟ್ಟು ಆರು ಮಂದಿಯನ್ನು ಈಗಾಗಲೇ ಸಿಐಡಿ ತಂಡ ಬಂಧಿಸಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ತಂಡ ದಿವ್ಯಾ ಅವರ ಪತಿ ರಾಜೇಶ್ ಅವರನ್ನು ವಿಚಾರಣೆ ನಡೆಸುತ್ತಿದೆ.