×
Ad

ದಿಲ್ಲಿ ಜಹಾಂಗೀರ್ಪುರಿ ಹಿಂಸಾಚಾರ ಪ್ರಕರಣ: 23 ಮಂದಿಯ ಬಂಧನ

Update: 2022-04-18 13:39 IST

ಹೊಸದಿಲ್ಲಿ: ಎಂಟು ಪೊಲೀಸರು ಹಾಗೂ ಓರ್ವ ನಾಗರಿಕ ಗಾಯಗೊಂಡಿರುವ  ವಾಯುವ್ಯ ದಿಲ್ಲಿಯ ಜಹಾಂಗೀರ್ಪುರಿಯಲ್ಲಿ ಶನಿವಾರ ಸಂಜೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎರಡು ಸಮುದಾಯಕ್ಕೆ ಸೇರಿರುವ 23 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

"23 ಜನರನ್ನು ಬಂಧಿಸಲಾಗಿದೆ. ಅವರು ಎರಡೂ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಯಾವುದೇ ವ್ಯಕ್ತಿಯ ವಿರುದ್ಧ  ಆತನ ವರ್ಗ, ಧರ್ಮ, ಸಮುದಾಯವನ್ನು ಲೆಕ್ಕಿಸದೆ ಕ್ರಮ ಕೈಗೊಳ್ಳಲಾಗುವುದು" ಎಂದು ದಿಲ್ಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಪ್ರಕರಣವನ್ನು ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಾಲ್ಕು ವಿಧಿವಿಜ್ಞಾನ ತಂಡಗಳು ಇಂದು ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿವೆ. ಸಿಸಿಟಿವಿ ದೃಶ್ಯಾವಳಿ ಹಾಗೂ  ಡಿಜಿಟಲ್ ಮಾಧ್ಯಮಗಳನ್ನು ವಿಶ್ಲೇಷಣೆ ನಡೆಸಲಾಗುತ್ತಿದೆ,’’ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News