ಹುಬ್ಬಳ್ಳಿ ಹಿಂಸಾಚಾರ ಪ್ರಕರಣ: ವಿವಾದಾತ್ಮಕ ಸ್ಟೇಟಸ್ ಹಾಕಿದ್ದ ಆರೋಪಿಗೆ ಎ.30ರವರೆಗೆ ನ್ಯಾಯಾಂಗ ಬಂಧನ
Update: 2022-04-18 16:02 IST
ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಘಟನೆಗೆ ಸಂಬಂಧಿಸಿ ಪ್ರಮುಖ ಆರೋಪಿ ಅಭಿಷೇಕ್ ಹಿರೇಮಠಗೆ ನಗರದ ಕೋರ್ಟ್ ಎ. 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಸಾಮಾಜಿಕ ಮಾಧ್ಯಮ ವಾಟ್ಸಪ್ ನಲ್ಲಿ ಆರೋಪಿ ಅಭಿಷೇಕ್ ಹಿರೇಮಠ ಆಕ್ಷೇಪಾರ್ಹ ಸ್ಟೇಟಸ್ ಹಾಕಿದ್ದ ಬಳಿಕ ಶನಿವಾರ ರಾತ್ರಿ ಗುಂಪೊಂದು ನಗರದಲ್ಲಿ ಕಲ್ಲು ತೂರಾಟ ನಡೆಸಿದ್ದು, ಇನ್ ಸ್ಪೆಕ್ಟರ್ ಸೇರಿದಂತೆ 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.
ಘಟನೆಗೆ ಸಂಬಂಧಿಸಿ ಸುಮಾರು 89 ಮಂದಿ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಆರೋಪಿಗಳನ್ನು ಪೊಲೀಸರು ಸೋಮವಾರ ಕೋರ್ಟ್ ಗೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಆರೋಪಿ ಅಭಿಷೇಕ್ ಪರ ವಕೀಲರಿಂದ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ಮಂಗಳವಾರ ಸರ್ಕಾರಿ ವಕೀಲರಿಂದ ತಕರಾರು ಅರ್ಜಿ ಸಲ್ಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.