×
Ad

ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

Update: 2022-04-18 16:17 IST

ಮಂಡ್ಯ: 'ಮಠಗಳ ಅನುದಾನ ಪಡೆಯಲು ಕಮಿಷನ್ ಕೊಡಬೇಕಾಗುತ್ತದೆ ' ಎಂಬ ಸರ್ಕಾರದ ವಿರುದ್ಧದ ದಿಂಗಾಲೇಶ್ವರ ಸ್ವಾಮೀಜಿ ಅವರ ಆರೋಪದ ಕುರಿತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅವರು, 'ಧರ್ಮ ರಕ್ಷಕರು ಎಂದು ತಮ್ಮನ್ನು ಕರೆದುಕೊಳ್ಳುವ ಬಿಜೆಪಿಯವರು ಮಠ, ಮಂದಿರಗಳ ಅನುದಾನವನ್ನೂ ಬಿಡದೆ 30% ಕಮಿಷನ್ ತಿಂದು ತೇಗುತ್ತಿರುವುದು ನಾಚಿಕೆಗೇಡು. 10% ಡಿಸ್ಕೌಂಟ್ ಯಾಕೆ? ಅದನ್ನು ತಿಂದು ಬಿಡಿ. ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?' ಎಂದು ಬಿಜೆಪಿಗೆ ಪ್ರಶ್ನೆ ಮಾಡಿದ್ದಾರೆ. 

'ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ, ದಾಖಲೆಗಳನ್ನು ಬಿಡುಗಡೆ ಮಾಡಿ‌ ಮಾತನಾಡಿ.ಬುಟ್ಟಿಯ ಒಳಗಿರುವುದು ನಾಗರ ಹಾವೋ, ಹಾವಿನಪುರದ ಹಾವೋ ನೋಡಿಯೇ ಬಿಡೋಣ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಇದನ್ನು ಓದಿ: ಮಠಗಳಿಗೆ ಬಿಡುಗಡೆಯಾಗುವ ಅನುದಾನ ಪಡೆಯಲೂ ಶೇ.30ರಷ್ಟು ಕಮಿಷನ್‌ ನೀಡಬೇಕಿದೆ: ದಿಂಗಾಲೇಶ್ವರ ಸ್ವಾಮೀಜಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News