ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದ ಆರೋಪಿ ಜೊತೆಗಿದ್ದ ಗೃಹ ಸಚಿವರ ಫೋಟೊ ಪೋಸ್ಟ್ ಮಾಡಿದ ಕಾಂಗ್ರೆಸ್

Update: 2022-04-18 14:16 GMT

ಬೆಂಗಳೂರು: ರಾಜ್ಯದಲ್ಲಿ 545 ಪಿಎಸ್ಐ ಹುದ್ದೆ ನೇಮಕಾತಿಯ ಅಕ್ರಮ‌ ಆರೋಪ ಎದುರಿಸುತ್ತಿರುವ ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ನಾಯಕಿ ದಿವ್ಯಾ ಹಾಗರಗಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆ ನಿಂತಿದ್ದ ಫೋಟೊ ಒಂದನ್ನು ಕಾಂಗ್ರಸ್ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿ  'ದಿವ್ಯಾ ಹಾಗರಗಿ ಅವರ ಜೊತೆ ಆತ್ಮೀಯತೆ ಹೊಂದಿರುವಾಗ ನ್ಯಾಯಯುತ ತನಿಖೆಯನ್ನು ನಿರೀಕ್ಷಿಸಲು ಸಾಧ್ಯವೇ?' ಎಂದು ಪ್ರಶ್ನಿಸಿದೆ. 

ಹಾಗರಗಿ ಅವರ ಕುಟುಂಬದ ಸದಸ್ಯರ ಜೊತೆ ಗೃಹ ಸಚಿವರು ನಿಂತಿರುವ ಫೋಟೊ ಇದೀಗ ಸಾಮಾಜಿಕ ಜಾಲ ತಾಣದಾದ್ಯಂತ ವೈರಲ್ ಆಗಿದೆ.ಇನ್ನು ಕಳೆದ ಮೂರ್ನಾಲ್ಕು ದಿನಗಳಿಂದ  ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ತಂಡ ದಿವ್ಯಾ ಅವರ ಪತಿ ರಾಜೇಶ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ. 

ಈ ಮಧ್ಯೆ 'ದಿವ್ಯಾ ಹಾಗಾರಗಿ ಪಕ್ಷದ ನಾಯಕಿಯಲ್ಲ' ಎಂದು ಬಿಜೆಪಿ ಹೇಳಿದೆ. 

ಹಾಗರಗಿಗೆ ಸೇರಿದ್ದ ಜ್ಞಾನಜ್ಯೋತಿ ಇಂಗ್ಲಿಷ್​ ಮೀಡಿಯಂ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಕಳೆದ ಮೂರ್ನಾಲ್ಕು ದಿನಗಳಿಂದ  ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಅಸಹಕಾರ ಹಾಗೂ ಆರೋಪಿಗಳ ನಾಪತ್ತೆಗೆ ಬೆಂಬಲ ನೀಡುತ್ತಿದ್ದಾರೆಂಬ ಆರೋಪದಲ್ಲಿ ಹಾಗರಗಿ ಪತಿ ರಾಜೇಶ್‌ರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಹಿನ್ನೆಲೆಯಲ್ಲಿ ಸಿಐಡಿ ತಂಡ ದಿವ್ಯಾ ಅವರ ಪತಿ ರಾಜೇಶ್ ಅವರನ್ನು ವಿಚಾರಣೆ ನಡೆಸುತ್ತಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News