×
Ad

ಕೋಡಿ ಬ್ಯಾರೀಸ್ ವಿದ್ಯಾರ್ಥಿನಿ ದಿವ್ಯಶ್ರೀಗೆ ರ‍್ಯಾಂಕ್

Update: 2022-04-18 20:37 IST
ದಿವ್ಯಶ್ರೀ

ಕುಂದಾಪುರ : ಮಂಗಳೂರು ವಿಶ್ವವಿದ್ಯಾನಿಲಯದ 2019-20ನೇ ಸಾಲಿನ ಫೆಬ್ರವರಿ 2021ರಲ್ಲಿ ನಡೆದ ಬಿ.ಎಡ್ ಪದವಿಯ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ದಿವ್ಯಶ್ರೀ ಕೆ. ಶೇ.85.75 ಅಂಕಗಳೊಂದಿಗೆ 8ನೇ ರ‍್ಯಾಂಕ್ ಗಳಿಸಿದ್ದಾರೆ.

ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿಗೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಮ್ ಅಬ್ದುಲ್ ರೆಹಮಾನ್, ಸಂಚಾಲಕ ಸಯ್ಯದ್ ಮಹಮ್ಮದ್ ಬ್ಯಾರಿ, ಆಡಳಿತ ನಿರ್ದೇಶಕ ದೋಮ ಚಂದ್ರಶೇಖರ್, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News