×
Ad

ಬಿಬಿಎಂಪಿ ಕಸದ ಲಾರಿ ಢಿಕ್ಕಿ: ಸ್ಥಳದಲ್ಲೇ ಮಹಿಳೆ ಮೃತ್ಯು

Update: 2022-04-18 21:22 IST

ಬೆಂಗಳೂರು, ಎ.18: ಬಿಬಿಎಂಪಿ ಕಸದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಪದ್ಮಿನಿ(39) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇಲ್ಲಿನ ನಾಯಂಡಹಳ್ಳಿ ರಸ್ತೆಯಲ್ಲಿ ಪದ್ಮಿನಿ ಸ್ಕೂಟರ್‍ನಲ್ಲಿ ಸಾಗುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಕಸದ ಲಾರಿ ಏಕಾಏಕಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರ ರಭಸಕ್ಕೆ ಕೆಳಗೆ ಬಿದ್ದ ಪದ್ಮಿನಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News