ಕೋವಿಡ್ ಭೀತಿ: ಉತ್ತರಪ್ರದೇಶದ ಲಕ್ನೋ ಸೇರಿ ಆರು ಜಿಲ್ಲೆಗಳಲ್ಲಿ ಮಾಸ್ಕ್ ಕಡ್ಡಾಯ
Update: 2022-04-18 22:10 IST
ಲಕ್ನೋ,ಎ.18: ನೆರೆಯ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಉತ್ತರ ಪ್ರದೇಶ ಸರಕಾರವು ರಾಜಧಾನಿ ಲಕ್ನೋ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶ (ಎನ್‌ಸಿಆರ್)ದ ಆರು ಜಿಲ್ಲೆಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ.
ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ಎನ್‌ಸಿಆರ್ ವ್ಯಾಪ್ತಿಯ ಜಿಲ್ಲೆಗಳಲ್ಲಿ ಪರಿಣಾಮ ಬೀರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರವು ಗೌತಮ ಬುದ್ಧ ನಗರ, ಘಾಝಿಯಾಬಾದ್, ಹಾಪುರ್, ಮೀರತ್, ಬುಲಂದಶಹರ್, ಬಾಗಪತ್ ಮತ್ತು ಲಕ್ನೋಗಳಲ್ಲಿ ಮಾಸ್ಕ್ ಗಳ ಬಳಕೆಯನ್ನು ಕಡ್ಡಾಯಗೊಳಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದರು.
ಕಳೆದ 24 ಗಂಟೆಗಳಲ್ಲಿ ಗೌತಮಬುದ್ಧ ನಗರದಲ್ಲಿ 65, ಘಾಝಿಯಾಬಾದ್ ನಲ್ಲಿ 20 ಮತ್ತು ಲಕ್ನೋದಲ್ಲಿ 10 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಪರಿಸ್ಥಿತಿಯ ಮೇಲೆ ನಿಕಟ ನಿಗಾ ಇರಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆದೇಶಿಸಿದ್ದಾರೆ.