ಸುರತ್ಕಲ್: ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ
Update: 2022-04-18 22:43 IST
ಸುರತ್ಕಲ್ : ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಇಂಧನ ಬೆಲೆಗಳ ಏರಿಕೆ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುರತ್ಕಲ್ ಬ್ಲಾಕ್ ಸಮಿತಿ ವತಿಯಿಂದ ಸುರತ್ಕಲ್ ಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ವೇಳೆ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಸೈಕಲ್, ಗ್ಯಾಸ್ ಸಿಲಿಂಡರ್‌ಗಳನ್ನು ಪ್ರದರ್ಶಿಸಿದರು.
ಅಧ್ಯಕ್ಷತೆಯನ್ನು ಸುರತ್ಕಲ್ ಬ್ಲಾಕ್ ಅಧ್ಯಕ್ಷ ಸಲಾಂ ಕಾನ ವಹಿಸಿದ್ದರು. ಈ ಸಂದರ್ಭದಲ್ಲಿ ಎಸ್ ಡಿಪಿಐ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಇರ್ಫಾನ್ ಕಾಲನಿ, ನೂರುಲ್ಲಾ ಕುಳಾಯಿ, ಜಲ್ಲಾ ಸಮಿತಿ ಸದಸ್ಯ ಅಝೀಝ್ ಸುರತ್ಕಲ್ ಹಾಗೂ ಜಿಲ್ಲಾ ಸಮಿತಿ ಸದಸ್ಯರು, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.