ಪಬ್ಲಿಕ್ ಪರೀಕ್ಷಾ ಫಲಿತಾಂಶ; ಹಿದಾಯತುಲ್ ಇಸ್ಲಾಂ ಮದ್ರಸ ತಾಳಿಪಡ್ಪಿಗೆ 100%

Update: 2022-04-18 17:17 GMT

ಬಿ.ಸಿ.ರೋಡ್ : ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡು 5, 7 ಮತ್ತು 10ನೇ ತರಗತಿಗೆ ನಡೆಸಿದ 2021-22ನೆ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಮಿತ್ತಬೈಲ್ ಜಮಾಅತ್ ಅಧೀನದಲ್ಲಿರುವ ತಾಳಿಪಡ್ಪು ಹಿದಾಯತುಲ್ ಇಸ್ಲಾಂ ಮದ್ರಸಕ್ಕೆ ಶೇಕಡಾ100 ಫಲಿತಾಂಶ ಬಂದಿದೆ.

ಐದನೇ ತರಗತಿಯಲ್ಲಿ ಪರೀಕ್ಷೆಯಲ್ಲಿ ಭಾಗವಹಿಸಿದ 21 ವಿದ್ಯಾರ್ಥಿಗಳಲ್ಲಿ ಎಲ್ಲರೂ  ತೇರ್ಗಡೆಯಾಗಿದ್ದು. ಹತ್ತು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲೂ, ಹತ್ತು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲೂ, ಒಂದು ವಿದ್ಯಾರ್ಥಿನಿ ಮಾತ್ರ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಏಳನೇ ತರಗತಿಯಲ್ಲಿ ಪರೀಕ್ಷೆಯಲ್ಲಿ ಭಾಗವಹಿಸಿದ 34 ವಿದ್ಯಾರ್ಥಿಗಳಲ್ಲಿ ಎಲ್ಲರೂ ತೇರ್ಗಡೆಯಾಗಿದ್ದು 3 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದರೆ 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೂ 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲೂ 1 ವಿದ್ಯಾರ್ಥಿ  ತೃತೀಯ ದರ್ಜೆಯಲ್ಲೂ ಉತ್ತೀರ್ಣರಾಗಿದ್ದಾರೆ.

ಹತ್ತನೇ ತರಗತಿಯಲ್ಲಿ ಪರೀಕ್ಷೆಯಲ್ಲಿ ಭಾಗವಹಿಸಿದ 4 ವಿದ್ಯಾರ್ಥಿಗಳಲ್ಲಿ ಇಬ್ಬರು ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್ ಪಡೆದರೆ ಇನ್ನಿಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News