×
Ad

ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್‌ ಮನೋಜ್ ಪಾಂಡೆ ನೇಮಕ‌

Update: 2022-04-18 23:10 IST
Photo: PTI

ಹೊಸದಿಲ್ಲಿ,ಎ.18: ಈ ತಿಂಗಳ ಅಂತ್ಯದಲ್ಲಿ ನಿವೃತ್ತರಾಗಲಿರುವ ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ ಅವರ ಉತ್ತರಾಧಿಕಾರಿಯಾಗಿ ಲೆ.ಜ.ಮನೋಜ್ ಪಾಂಡೆ ಅವರನ್ನು ನೇಮಕಗೊಳಿಸಲಾಗಿದೆ.

ಲೆ.ಜ.ಪಾಂಡೆ ಅವರು ಸೇನಾ ಮುಖ್ಯಸ್ಥರಾಗಲಿರುವ ಕಾರ್ಪ್ಸ್ ಆಫ್ ಇಂಜಿನಿಯರ್ಸ್ ನ ಮೊದಲ ಅಧಿಕಾರಿಯಾಗಲಿದ್ದಾರೆ. ಅವರು ಸೇನೆಯಲ್ಲಿ ಜ.ನರವಣೆ ನಂತರ ಅತ್ಯಂತ ಹಿರಿಯ ಅಧಿಕಾರಿಯಾಗಿದ್ದಾರೆ.

ಜ.ನರವಣೆ ಅವರು ಸೇನಾ ಸಿಬ್ಬಂದಿಗಳ ಮುಖ್ಯಸ್ಥ (ಸಿಡಿಎಸ್) ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ. ಭಾರತದ ಮೊದಲ ಸಿಡಿಎಸ್ ಜ.ಬಿಪಿನ್ ರಾವತ್ ಅವರು ಕಳೆದ ವರ್ಷದ ಡಿಸೆಂಬರ್ ನಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಾಗಿನಿಂದ ಈ ಹುದ್ದೆ ಖಾಲಿಯಾಗಿ ಉಳಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News