×
Ad

ನಾವು ಮಠಕ್ಕೆ ಅನುದಾನವನ್ನೇ ಪಡೆಯುವುದಿಲ್ಲ, ಕೊಟ್ಟ ಅನುದಾನ ಹಿಂತಿರುಗಿಸಿದ್ದೇವೆ: ಬಸವ ಜಯಮೃತ್ಯುಂಜಯ ಶ್ರೀ

Update: 2022-04-18 23:11 IST

ಬೆಂಗಳೂರು: 'ನಾವು ಮಠಕ್ಕೆ ಅನುದಾನವನ್ನೇ ಪಡೆಯುವುದಿಲ್ಲ. ಈ ಹಿಂದೆ ಕೊಟ್ಟ ಅನುದಾನ ಸರಕಾರಕ್ಕೆ ಹಿಂತಿರುಗಿಸಿದ್ದೇವೆ' ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. 

ಸೋಮವಾರ ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯ ಸಮಿತಿ ಮುಖಂಡರ ಜತೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶ್ರೀಗಳು, ಮಠದಿಂದಲೂ 30 ಪರ್ಸೆಂಟ್ ಕಮಿಷನ್ ಪಡೆದು ಅನುದಾನ ನೀಡಲಾಗುತ್ತದೆ ಎಂದು ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಮಾಡಿದ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

 'ದಿಂಗಾಲೇಶ್ವರರು ಯಾವ ಆಧಾರದ ಮೇಲೆ ಹೇಳಿದ್ದಾರೋ ಗೊತ್ತಿಲ್ಲ. ಬಹುಶಃ ಅವರ ಬಳಿ ಆ ಕಮಿಷನ್ ಆರೋಪದ ಬಗ್ಗೆ ಮಾಹಿತಿ ಇರಬಹುದು. ಆದರೆ, ನಮಗಂತೂ ಸರಕಾರದ ಅನುದಾನ ಬೇಕಾಗಿಲ್ಲ. ಸಮುದಾಯಕ್ಕೆ 2ಎ ಮೀಸಲಾತಿ ಬೇಕಷ್ಟೇ' ಎಂದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News