ಗಂಟಾಲ್ ಕಟ್ಟೆ: ಬೈಕ್- ಸ್ಕೂಟರ್ ಢಿಕ್ಕಿ; ಓರ್ವ ಸ್ಥಳದಲ್ಲೇ ಮೃತ್ಯು

Update: 2022-04-19 06:27 GMT

ಮೂಡುಬಿದಿರೆ: ಬೈಕ್- ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟ ಘಟನೆ ಗಂಟಾಲ್ ಕಟ್ಟೆ ಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ವಾಲ್ಪಾಡಿಯ ಕೂಲಿ ಕಾರ್ಮಿಕರಾದ ರಮೇಶ್ ಸ್ಥಳದಲ್ಲೇ ಮೃತಪಟ್ಟವರು ಎಂದು ತಿಳಿದುಬಂದಿದೆ.

ಈ ಬಗ್ಗೆ ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹೆಚ್ಚಿನ  ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News