ಶ್ರೀಲಂಕಾ: ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ; ಓರ್ವ ಮೃತ್ಯು

Update: 2022-04-19 14:12 GMT
Photo: twitter/AndyVermaut

ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಜನತೆ ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಮೇಲೆ ನಡೆದ ಗುಂಡಿನ ದಾಳಿಗೆ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ.

ಪ್ರತಿಭಟನಾ ನಿರತ ಗುಂಪು ಹಿಂಸಾಚಾರಕ್ಕೆ ತಿರುಗಿ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಅವರು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಬೇಕಾಯಿತು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ರಾಜಧಾನಿ ಕೊಲಂಬೊದಿಂದ 95 ಕಿ.ಮೀ ದೂರದಲ್ಲಿರುವ ಮಧ್ಯ ಶ್ರೀಲಂಕಾದ ರಂಬುಕ್ಕನಾದಲ್ಲಿ ತೀವ್ರ ತೈಲ ಕೊರತೆ ಮತ್ತು ಹೆಚ್ಚಿನ ಬೆಲೆಗಳನ್ನು ಪ್ರತಿಭಟಿಸಿ ಜನರು ಹೆದ್ದಾರಿಯನ್ನು ತಡೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News