ಗೂಡಿನಬಳಿ : ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ 100% ಫಲಿತಾಂಶ

Update: 2022-04-20 07:16 GMT
ಆಯಿಷಾ ದಿಲ್ ಶಾದ್, ಮೊಹಿದೀನ್ ಬಾಹಿರ್, ಮುಹಮ್ಮದ್ ಶಾಝಿನ್

ಬಿ.ಸಿ.ರೋಡ್ : ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡಿನ ಅಧೀನದಲ್ಲಿ ನಡೆದ 5,7,10 ಮತ್ತು 12ನೇ ತರಗತಿಗೆ ನಡೆದ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಗೂಡಿನಬಳಿ ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ  ಶೇಕಡಾ 100 ಫಲಿತಾಂಶ ದಾಖಲಿಸಿದ್ದು ಮೂವರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆ.

ಐದನೇ ತರಗತಿಯಲ್ಲಿ ಪರೀಕ್ಷೆ ಬರೆದ 34 ವಿದ್ಯಾರ್ಥಿಗಳ ಪೈಕಿ 4 ವಿದ್ಯಾರ್ಥಿಗಳು ಪ್ರಥಮ ದರ್ಜೆ, 13 ದ್ವಿತೀಯ ದರ್ಜೆ, ಹಾಗೂ 17 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

7ನೇ ತರಗತಿಯ 27 ವಿದ್ಯಾರ್ಥಿಗಳ ಪೈಕಿ ಇಬ್ಬರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 20ಮಂದಿ ಪ್ರಥಮ ದರ್ಜೆ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ ಓರ್ವ ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಹತ್ತನೇ ತರಗತಿಯ 13 ವಿದ್ಯಾರ್ಥಿಗಳ ಪೈಕಿ ಒಬ್ಬಾಕೆ  ಡಿಸ್ಟಿಂಕ್ಷನ್, 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ,  3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 3 ವಿದ್ಯಾರ್ಥಿನಿಯರು ತೃತೀಯ ಶ್ರೇಣಿಯಲ್ಲೂ ಉತ್ತೀರ್ಣರಾಗಿದ್ದಾರೆ.

ಹನ್ನೆರಡನೇ ತರಗತಿಯ 6 ವಿದ್ಯಾರ್ಥಿಗಳ ಪೈಕಿ  ಇಬ್ಬರು  ಪ್ರಥಮ ಶ್ರೇಣಿ, ಇಬ್ಬರು ದ್ವಿತೀಯ ಶ್ರೇಣಿ ಹಾಗೂ ಇಬ್ಬರು ತೃತೀಯ ಶ್ರೇಣಿಯಲ್ಲೂ ಉತ್ತೀರ್ಣರಾಗಿದ್ದಾರೆ ಎಂದು ಮದ್ರಸ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News