ಮೈಸೂರು: ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ

Update: 2022-04-20 07:33 GMT

ಮೈಸೂರು: ಬಡವರ ಬದುಕು ಕಸಿಯುತ್ತಿರುವ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ 40% ಕಮಿಷನ್ ಕಿರುಕುಳಕ್ಕೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಬಲಿ ಪಡೆದ ರಾಜ್ಯ ಸರ್ಕಾರದ ವಿರುದ್ಧ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ನಗಾರಿ ಭಾರಿಸುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು.

ನಗರದ ಗಾಂಧಿ ವೃತ್ತದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬೃಹತ್  ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು.

ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಮಾಜಿ ಸಚಿವರುಗಳಾದ ಡಾ.ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯದರ್ಶಿ ಚಂದ್ರಮೌಳಿ,  ಮಾಜಿ ಸಂಸದ ಕಾಗಲವಾಡಿ ಶಿವಣ್ಣ,  ಶಾಸಕರುಗಳಾದ ತನ್ವೀರ್ ಸೇಠ್, ಎಚ್.ಪಿ.ಮಂಜುನಾಥ್,  ಅನಿಲ್ ಚಿಕ್ಕಮಾದು, ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಮಾಜಿ ಶಾಸಕರುಗಳಾದ ಎಂ‌ಕೆ.ಸೋಮಶೇಖರ್, ಕಳಲೆ ಕೇಶವಮೂರ್ತಿ, ವಾಸು, ಮಳವಳ್ಳಿ ಪಿ.ನರೇಂದ್ರಸ್ವಾಮಿ, ಮಾಜಿ ವಿಧಾನಪರಿಷತ್ ಸದಸ್ಯ ಆರ್.ಧರ್ಮಸೇನ, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಣೆ ಡಾ.ಪುಷ್ಪಾ ಅಮರ್ ನಾಥ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಉಪಮೇಯರ್ ಅನ್ವರ ಬೇಗ್,  ಕಾಂಗ್ರೆಸ್ ಮುಖಂಡರುಗಳಾದ ಶಿವಣ್ಣ, ಮಂಜುಳ ಮಾನಸ, ಡಿ.ರವಿಶಂಕರ್, ಆಕ್ಬರ್ ಅಲೀಂ,  ಕೆ.ಎಸ್ .ಶಿವರಾಮ್, ಈಶ್ವರ್ ಚಕ್ಕಡಿ, ಎನ್.ಭಾಸ್ಕರ್, ಹೆಡತಲೆ ಮಂಜುನಾಥ್, ನರೇಂದ್ರ, ಆರಿಫ್ ಹುಸೇನ್, ಕೆ.ಮರೀಗೌಡ, ಸೇರಿದಂತೆ  ಹಲವಾರು ಮಂದಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News