×
Ad

ಸುರತ್ಕಲ್‌ನಲ್ಲಿ ತಾಲೂಕು ಮಟ್ಟದ ಆರೋಗ್ಯ ಮೇಳ

Update: 2022-04-20 21:43 IST

ಸುರತ್ಕಲ್ : ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಿತ ಹಲವು ಆರೋಗ್ಯ ಕೇಂದ್ರಗಳನ್ನು ಖಾಸಗೀ ಆಸ್ಪತ್ರೆಗಳ ಜೊತೆಗೂಡಿ ಮೇಲ್ದರ್ಜೆಗೆ ಏರಿಸುವ ಚಿಂತನೆಯಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದ್ದಾರೆ.

ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ಮಹಾ ನಗರ ಪಾಲಿಕೆ, ಜಿಲ್ಲಾ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶ್ರೀನಿವಾಸ್ ವೈದ್ಯಕೀಯ ಕಾಲೇಜು ಮುಕ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುರತ್ಕಲ್‌ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಆಯೋಜಿಸಲಾದ ತಾಲೂಕು ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ದ.ಕ ಜಿಲ್ಲೆ ಆರೋಗ್ಯ ಕ್ಷೇತ್ರದಲ್ಲಿ ಮುಂದಿದೆ. ಆದರೆ ಸರಕಾರಿ ಆರೋಗ್ಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಮುಂಜಾಗ್ರತೆ ವಹಿಸುವಂತೆ ಹಾಗೂ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸುತ್ತಾ ಆರೋಗ್ಯಕರವಾಗಿ ಇರುವಂತೆ ನೋಡಿಕೊಳ್ಳಲು, ಮಾಹಿತಿ ಒದಗಿಸಲು ತಾಲೂಕು ಮಟ್ಟದ ಆರೋಗ್ಯ ಮೇಳ ಸಹಕಾರಿ‌ ಎಂದರು.

ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್, ಆರೋಗ್ಯಾಧಿಕಾರಿ ಡಾ.ಕಿಶೋರ್‌ ಕುಮಾರ್‌, ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್‌ ಸುಮಂಗಳಾ ರಾವ್, ಮನಪಾ ಸದಸ್ಯರಾದ ಶ್ವೇತಾ ಎ. ಪೂಜಾರಿ, ಸರೀತಾ ಶಶಿಧರ್‌, ಶೋಭಾ ರಾಜೇಶ್, ಶಂಶಾದ್ ಬೇಗಮ್, ನಯನ ಆರ್. ಕೋಟ್ಯಾನ್, ಲಕ್ಷ್ಮೀಶೇಖರ್ ದೇವಾಡಿಗ, ಕಾರ್ಪೊರೇಟರ್ ಗಳಾದ ವರುಣ್ ಚೌಟ, ಲೋಕೇಶ್ ಬೊಳ್ಳಾಜೆ, ತಹಶೀಲ್ದಾರ್ ಪುರಂದರ ಹೆಗ್ಡೆ, ಆಯುಷ್ ಅಧಿಕಾರಿ ಮಹಮ್ಮದ್ ಇಕ್ವಾಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪಾಪಬೋವಿ, ಡಾ.ಆಶೋಕ್, ಡಾ. ಸದಾಶಿವ ಶ್ಯಾನ್‌ ಬೋಗ್, ಡಾ.ರಾಜೇಶ್, ಡಾ.ನವೀನ್ ಕುಲಾಲ್, ಡಾ.ದೀಪಾ ಪ್ರಭು, ಡಾ.ಮಂಜುಳಾ, ಡಾ.ಜಗದೀಶ್ ಶ್ರೀನಿವಾಸ್ ಆಸ್ಪತ್ರೆಯ ಡಾ.ಗುರುಕಾಂತ್ , ಎಂಆರ್ ಪಿಎಲ್ ನ ಮಹಾಪ್ರಬಂಧಕ ಸತೀಶ್ ಎಂ, ಡಾ. ಸುಜಯ್ ಭಂಡಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News