×
Ad

ಹುಬ್ಬಳ್ಳಿ ಹಿಂಸಾಚಾರ ಪ್ರಕರಣ: ವಿವಾದಾತ್ಮಕ ಪೋಸ್ಟ್ ಹಾಕಿದ್ದ ಅಭಿಷೇಕ್ ಹಿರೇಮಠ ಜಾಮೀನು ಅರ್ಜಿ ವಜಾ

Update: 2022-04-20 23:03 IST

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಘಟನೆಗೆ ಸಂಬಂಧಿಸಿ ವಾಟ್ಸ್ ಆ್ಯಪ್ ನಲ್ಲಿ ವಿವಾದಾತ್ಮಕ ಸ್ಟೇಟಸ್​ ಹಾಕಿ ಬಂಧಿತನಾಗಿರುವ  ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ ಮಧ್ಯಂತರ ಜಾಮೀನು ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾಗಿರುವ ಅಭಿಷೇಕ್ ಹಿರೇಮಠ್ ನನ್ನು  ವಿವಾದಾತ್ಮಕ ಸ್ಟೇಟಸ್​ ಹಾಕಿದ್ದ ಆರೋಪದಡಿ ಎಪ್ರಿಲ್ 16ರಂದು ಪೊಲೀಸರು ಬಂಧಿಸಿದ್ದರು. ಈ ವಿದ್ಯಾರ್ಥಿಗೆ ಎ. 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಕೀಲ ಸಂಜು ಬಡಸ್ಕರ 4ನೇ ಅಧಿಕ ದಿವಾಣಿ ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಜಾಮೀನು  ಅರ್ಜಿ ವಜಾಗೊಳಿಸಿರುವ ನ್ಯಾಯಾಲಯ ಪೊಲೀಸ್​ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪೊಲೀಸರಿಗೆ ಆದೇಶಿಸಿದೆ.

ಸಾಮಾಜಿಕ ಮಾಧ್ಯಮ ವಾಟ್ಸಪ್ ನಲ್ಲಿ ಆರೋಪಿ ಅಭಿಷೇಕ್ ಹಿರೇಮಠ ಆಕ್ಷೇಪಾರ್ಹ ಸ್ಟೇಟಸ್ ಹಾಕಿದ್ದ ಬಳಿಕ ಎಪ್ರಿಲ್ 16ರಂದು ರಾತ್ರಿ ಗುಂಪೊಂದು ಹಳೇ ಹುಬ್ಬಳ್ಳಿಯ ನಗರದಲ್ಲಿ ಕಲ್ಲು ತೂರಾಟ ನಡೆಸಿದ್ದು, ಇನ್ ಸ್ಪೆಕ್ಟರ್ ಸೇರಿದಂತೆ 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News