×
Ad

ಸುರತ್ಕಲ್: ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಡಿವೈಡರ್ ಹಾರಿದ ಕಾರು!

Update: 2022-04-21 14:13 IST

ಸುರತ್ಕಲ್, ಎ.21: ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿದ ಘಟನೆ ಸುರತ್ಕಲ್ ವಿದ್ಯಾಧಾಯಿನಿ ಶಾಲೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ.

ಕುಳಾಯಿ ನಿವಾಸಿ ಅಮೀನ್ ಟೈಲರ್ ಎಂಬವರಿಗೆ ಸೇರಿದ ಕಾರು ಇದಾಗಿದೆ. ಸುರತ್ಕಲ್ ನಲ್ಲಿ ಟೈಲರ್ ಅಂಗಡಿ ಹೊಂದಿರುವ ಅವರು ಇಂದು ಮಧ್ಯಾಹ್ನ ಊಟಕ್ಕೆಂದು ಸುರತ್ಕಲ್ ನಿಂದ ಮನೆಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಹಿಂದಿನಿಂದ ಬಂದ ಲಾರಿಯೊಂದು ಇವರು ಕಾರಿಗೆ ಬಲಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಡಿವೈಡರ್ ದಾಟಿ ಪಕ್ಕದ ರಸ್ತೆಗೆ ಬಂದು ನಿಂತಿದೆ. ಅಮೀನ್ ಟೈಲರ್ ರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ‌ ಸುಗಮ ‌ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News