×
Ad

ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಆಪ್ ಸೇರ್ಪಡೆ

Update: 2022-04-21 14:27 IST

ಬೆಂಗಳೂರು: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ನೇರ್ಪಡೆಯಾಗಿದ್ದಾರೆ. 

ಗುರುವಾರ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯುತ್ತಿರುವ ಬೃಹತ್‌ ರೈತ ಮಹಾಸಮ್ಮೇಳನದಲ್ಲಿ ಪಕ್ಷದ ಶಾಲು ಹೊದಿಸುವ ಮೂಲಕ ಕೋಡಿ ಹಳ್ಳಿ ಚಂದ್ರಶೇಖರ್ ಅವರನ್ನು ಅರವಿಂದ್ ಕೇಜ್ರಿವಾಲ್ ಅವರು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು. 

ಇತ್ತೀಚೆಗಷ್ಟೇ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಂಡಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News