×
Ad

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಕಾಂಗ್ರೆಸ್ ಶಾಸಕ ಗನ್ ಮ್ಯಾನ್ ಸಿಐಡಿ ವಶಕ್ಕೆ

Update: 2022-04-21 15:59 IST
ಸಾಂದರ್ಭಿಕ ಚಿತ್ರ

ಕಲಬುರಗಿ: ರಾಜ್ಯದಲ್ಲಿ ಸಂಚಲ ಮೂಡಿಸಿರುವ ಪಿಎಸ್ಐ (PSI) ನೇಮಕಾತಿ  ಆಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಅವರ ಗನ್ ಮ್ಯಾನ್ ಹಾಗೂ ಪೊಲೀಸ್ ಪೇದೆ ಒಬ್ಬರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಯ್ಯಣ್ಣ ದೇಸಾಯಿ ಹಾಗೂ ಕಲಬುರಗಿ ಸಿಟಿ ಆರ್ಮ್ಸ್ ರಿಸರ್ವ್ (ಸಿಎಆರ್) ಪೊಲೀಸ್ ಪೇದೆ ರುದ್ರಗೌಡ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಅಯ್ಯಣ್ಣ ಸಹ ಪಿಎಸ್ಐ ಪರೀಕ್ಷೆ ಬರೆದಿದ್ದರು. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅವರ ಹೆಸರು ಇರುವ ಈ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ದಿವ್ಯಾ ಹಾಗರಗಿ ನಿರೀಕ್ಷಣಾ ಜಮೀನು ಅರ್ಜಿ ಸಲ್ಲಿಸಿದ್ದಾರೆ. ಅವರ ಬಂಧನಕ್ಕೆ ಆಗ್ರಹಿಸಿ ಹೋರಾಟ ಮುಂದುವರಿದಿದೆ.

ಪಿಎಸ್ಐ ಪರೀಕ್ಷೆ ಬರೆದ 50 ಅಭ್ಯರ್ಥಿಗಳನ್ನು ಸಿಐಡಿ ಪೊಲೀಸರು ನೋಟಿಸ್ ನೀಡಿ ವಿಚಾರಣೆ ನಡೆಸಿದ್ದು, ಎಂಟು ಜನರನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News