ಮಂಡ್ಯ: ವಿದ್ಯುತ್ ಪ್ರವಹಿಸಿ ಇಬ್ಬರು ಮೃತ್ಯು
Update: 2022-04-21 19:34 IST
ಮಂಡ್ಯ, ಎ.21: ವಿದ್ಯುತ್ ಶಾಕ್‍ನಿಂದ ಇಬ್ಬರು ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಪುಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಗ್ರಾಮದ ರಮೇಶ್ (35) ಹಾಗೂ ಶಂಕರ್(25) ಎಂದು ಗುರುತಿಸಲಾಗಿದೆ.
ವಿದ್ಯುತ್ ಕಂಬದ ಬಳಿ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದ ವೇಳೆ ರಮೇಶ್ ವಿದ್ಯುತ್ ಶಾಕ್‍ಗೆ ಒಳಗಾಗಿದ್ದು, ತಕ್ಷಣ ಬಳಿಯಲ್ಲೇ ಇದ್ದ ಸ್ನೇಹಿತ ಶಂಕರ್ ರಕ್ಷಣೆಗೆ ದಾವಿಸಿದಾಗ ಅವರಿಗೂ ವಿದ್ಯುತ್ ಶಾಕ್ ಆಗಿದೆ ಎನ್ನಲಾಗಿದೆ.
ತಕ್ಷಣ ಇಬ್ಬರನ್ನೂ ಗ್ರಾಮಸ್ಥರು ಸಮೀಪದ ಕೆ.ಎಂ.ದೊಡ್ಡಿಯ ಜಿ.ಮಾದೇಗೌಡ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಮಾರ್ಗಮಧ್ಯೆಯ ಅವರು ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದ್ದಾರೆ.
ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.