×
Ad

ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Update: 2022-04-21 21:04 IST

ಉಡುಪಿ : ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ೨೦೨೧-೨೨ನೇ ಸಾಲಿನಲ್ಲಿ ಆದಿವಾಸಿ ಜನಾಂಗದ ಕೊರಗ ವಿದ್ಯಾರ್ಥಿಗಳು ಏಳನೇ ತರಗತಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದವರಿಗೆ ೨,೫೦೦ ರೂ. ವಿಶೇಷ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾ ಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: ೦೮೨೦-೨೫೭೪೮೧೪, ೨೯೫೦೧೯೮ ಅನ್ನು ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News