×
Ad

ಬೆಂಗಳೂರು: ಪತ್ನಿಯ ಹತ್ಯೆಗೈದ ಆರೋಪಿ ಪತಿಯ ಬಂಧನ

Update: 2022-04-21 21:54 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.21: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಜಗಳ ತೆಗೆದು ಪತ್ನಿಯ ಕತ್ತು ಹಿಸುಕಿ ಪತಿ ಪರಾರಿಯಾಗಿದ್ದು ಕೊಳೆತ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿರುವ ಘಟನೆ ಕಾಮಾಕ್ಷಿಪಾಳ್ಯದ ಕಾವೇರಿಪುರದಲ್ಲಿ ನಡೆದಿದೆ. 

ಕಾವೇರಿಪುರದ ವನಜಾಕ್ಷಿ(34) ಕೊಲೆಯಾದವರು, ಕೃತ್ಯ ನಡೆಸಿ ಪರಾರಿಯಾಗಿದ್ದ ಆಕೆಯ ಪತಿ ಅಶೋಕ್ ನನ್ನು ಪೆÇಲೀಸರು ಬಂಧಿಸಿದ್ದಾರೆ ಎಂದು ಡಿಸಿಪಿ ಡಾ.ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ವೃತ್ತಿಯಲ್ಲಿ ಕ್ಯಾಬ್ ಚಾಲಕನಾಗಿದ್ದ ಆರೋಪಿಯು ಗಾರ್ಮೆಂಟ್ಸ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದ ವನಜಾಕ್ಷಿಯನ್ನು ವಿವಾಹವಾಗಿದ್ದು ದಂಪತಿಗೆ ಮೂವರು ಮಕ್ಕಳಿವೆ. ಎ.17 ರಿಂದ ವನಜಾಕ್ಷಿ ನಾಪತ್ತೆಯಾಗಿದ್ದು, ಮನೆಯಿಂದ ಕೆಟ್ಟ ವಾಸನೆ ಬಂದ ಕೂಡಲೇ ಸ್ಥಳೀಯರು ಕಾಮಾಕ್ಷಿಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡ ಕಾಮಾಕ್ಷಿಪಾಳ್ಯ ಪೊಲೀಸರು ಕಾರ್ಯಾಚರಣೆ ಕೈಗೊಂಡು ಖಚಿತವಾದ ಮಾಹಿತಿಯನ್ನು ಆಧರಿಸಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಜಗಳ ಉಂಟಾಗಿ ಆಕ್ರೋಶಗೊಂಡು ಕೊಲೆ ಮಾಡಿರುವುದನ್ನು ಬಾಯ್ಬಿಟ್ಟಿದ್ದಾನೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News