ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಲು ಬಯಸಿದ್ದಾರೆ: ತಾರೀಖ್ ಅನ್ವರ್

Update: 2022-04-21 17:11 GMT

ಹೊಸದಿಲ್ಲಿ, ಎ. 20: ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಯಾವುದೇ ಪೂರ್ವ ಷರತ್ತು ಇಲ್ಲದೆ ಕಾಂಗ್ರೆಸ್ ಸೇರಲು ಬಯಸಿದ್ದಾರೆ ಎಂದು ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ತಾರೀಖ್ ಅಹ್ಮದ್ ಗುರುವಾರ ಹೇಳಿದ್ದಾರೆ. 

‘‘ಬಿಜೆಪಿಯನ್ನು ಎದುರಿಸಲು ಸಾಧ್ಯ ಇರುವ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಎಂಬುದು ಅವರ ಭಾವನೆ’’ ಎಂದು ಅನ್ವರ್ ಅವರು ಸುದ್ದಿ ಸಂಸ್ಥೆಯೊಂದರ ಸಂದರ್ಶನದ ಸಂದರ್ಭ ತಿಳಿಸಿದರು. ‘‘ಅದು ಅವರಿಗೆ ಅರ್ಥ ಆಗಿದೆ. ಅವರು ಉತ್ತಮ ವಿಶ್ಲೇಷಕ. ಅವರನ್ನು ಕಾಂಗ್ರೆಸ್ಗೆ ಸೇರಿಸಿದರೆ, ಖಚಿತವಾಗಿ ಪಕ್ಷಕ್ಕೆ ಪ್ರಯೋಜನವಾಗಲಿದೆ’’ ಎಂದು ಅವರು ಹೇಳಿದ್ದಾರೆ. ಎಪ್ರಿಲ್ 16ರಂದು ಕಾಂಗ್ರೆಸ್ ಉನ್ನತ ನಾಯಕರಲ್ಲಿ 2024ರ ಲೋಕಸಭಾ ಚುನಾವಣೆಗಳ ಕುರಿತ ಪ್ರಸ್ತುತಿ ಬಳಿಕ ಪ್ರಶಾಂತ್ ಕಿಶೋರ್ ಅವರು ಅವರೊಂದಿಗೆ ಹಲವು ಬಾರಿ ಸಭೆ ನಡೆಸಿದ್ದಾರೆ.

ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಸೇರಲಿದ್ದಾರೆಯೇ ಎಂಬ ಬಗ್ಗೆ ಪಕ್ಷದ ನಾಯಕರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು 

ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಎಪ್ರಿಲ್ 16ರಂದು ಹೇಳಿದ್ದರು. ಪ್ರಶಾಂತ್ ಕಿಶೋರ್ ಅವರು ಪಕ್ಷಕ್ಕೆ ಸೇರ್ಪಡೆಯಾಗುವುದರಿಂದ ಪಕ್ಷಕ್ಕೆ ಪ್ರಯೋಜನವಾಗಲಿದೆಯೇ ಎಂಬ ಬಗ್ಗೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ಹಿರಿಯ ನಾಯಕರ ಅಭಿಪ್ರಾಯ ಕೇಳಿದ್ದಾರೆ ಎಂದು ಅನ್ವರ್ ಹೇಳಿದ್ದಾರೆ. 

‘‘ಕಾಂಗ್ರೆಸ್ನಲ್ಲಿ ಯಾರೊಬ್ಬರೂ ಏಕಾಂಗಿಯಾಗಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಕಾಂಗ್ರೆಸ್ ಅಧ್ಯಕ್ಷರು ಅತ್ಯುಚ್ಛ. ಆದರೆ, ಅವರು ಪಕ್ಷದ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ’’ ಎಂದು ಅವರು ತಿಳಿಸಿದ್ದಾರೆ. ಸಲಹೆಗಾರನ ಸ್ಥಾನವನ್ನು ಪ್ರಶಾಂತ್ ಕಿಶೋರ್ ತ್ಯಜಿಸಿದ್ದಾರೆ. ಅವರು ಕಾಂಗ್ರೆಸ್ ಸೇರಲು ಬಯಸಿದ್ದಾರೆ. ಅಲ್ಲದೆ, ಅವರು ತನ್ನ ಅನುಭವವನ್ನು ಪಕ್ಷಕ್ಕಾಗಿ ಬಳಲಿದ್ದಾರೆ ಎಂದು ಅನ್ವರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News