ಡಿಮ್ಹಾನ್ಸ್ ಆಸ್ಪತ್ರೆಯಲ್ಲಿ ಎಂಆರ್ ಐ ಸ್ಕ್ಯಾನಿಂಗ್ ಅಳವಡಿಕೆ: ಹೈಕೋರ್ಟ್‍ಗೆ ಮಾಹಿತಿ

Update: 2022-04-21 17:44 GMT

ಬೆಂಗಳೂರು, ಎ.21: ಧಾರವಾಡದಲ್ಲಿನ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ಡಿಮ್ಹಾನ್ಸ್) ಆಸ್ಪತ್ರೆಯಲ್ಲಿ ಎಂಆರ್‍ಐ ಸ್ಕ್ಯಾನಿಂಗ್ ಅಳವಡಿಸುವ ಮೂಲಕ ನ್ಯಾಯಾಲಯದ ಆದೇಶವನ್ನು ರಾಜ್ಯ ಸರಕಾರ ಪಾಲನೆ ಮಾಡಿರುವ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಕೈಕೋರ್ಟ್ ಇತ್ಯರ್ಥಪಡಿಸಿತು. 

ಡಿಮ್ಹಾನ್ಸ್ ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ 1996ರಲ್ಲಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ಪೀಠಕ್ಕೆ ರಾಜ್ಯ ಸರಕಾರದ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ.

ವಿಚಾರಣೆ ವೇಳೆ ಹಾಜರಿದ್ದ ರಾಜ್ಯ ಸರಕಾರದ ಪರ ವಕೀಲರು, ಹೈಕೋರ್ಟ್ ನಿರ್ದೇಶನದಂತೆ ಆಸ್ಪತ್ರೆಗೆ ಅಗತ್ಯವಿದ್ದ ಎಂಆರ್‍ಐ ಸ್ಕ್ಯಾನಿಂಗ್ ಯಂತ್ರ ಅಳವಡಿಸಲಾಗಿದೆ. ಪ್ರಾಯೋಗಿಕ ಪರೀಕ್ಷೆಗಳು ನಡೆಯುತ್ತಿದ್ದು, ವೈದ್ಯಕೀಯ ಅಧೀಕ್ಷಕರನ್ನೂ ನೇಮಕ ಮಾಡಲಾಗಿದೆ ಎಂದು ತಿಳಿಸಿದರು. ಹಾಗೆಯೇ, ಯಂತ್ರ ಅಳವಡಿಸಿರುವ ಕುರಿತಂತೆ ಫೋಟೋ ಹಾಗೂ ವೈದ್ಯಕೀಯ ಅಧೀಕ್ಷಕರ ನೇಮಕಾತಿ ಆದೇಶದ ಪ್ರತಿಯನ್ನು ಪೀಠಕ್ಕೆ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News