ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ ಆರಂಭ

Update: 2022-04-22 05:07 GMT
ಮಂಗಳೂರಿನ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿಗಳು ತರಗತಿ ಪ್ರವೇಶಿಸಲು ಸರದಿಯಲ್ಲಿ ನಿಂತಿರುವುದು.

ಬೆಂಗಳೂರು, ಎ.22: ದ್ವಿತೀಯ ಪಿಯು ಪರೀಕ್ಷೆ ಆರಂಭಗೊಂಡಿದ್ದು, ರಾಜ್ಯದ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾರಂಭಿಸಿದ್ದಾರೆ.

ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಪೈಕಿ 6,00,519 ರೆಗ್ಯುಲರ್, 61,808 ಪುನರಾವರ್ತಿತ, 21,928 ಖಾಸಗಿ ಅಭ್ಯರ್ಥಿಗಳಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಎಲ್ಲ ಕಾರ್ಯಗಳು ಪೊಲೀಸ್ ಬಂದೋಬಸ್ತ್‌ನಲ್ಲಿ ನಡೆಯಲಿದ್ದು, ಸಿಸಿಟಿವಿ ಕ್ಯಾಮೆರಾ ನಿಗಾ ಇರಲಿದೆ. ಕೋವಿಡ್ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಪರೀಕ್ಷಾ ಕೇಂದ್ರಗಳನ್ನು ಪ್ರವೇಶಿಸಿದರು. 

ಸಮವಸ್ತ್ರ ಕಡ್ಡಾಯ: ‘ದ್ವಿತೀಯ ಪಿಯು ಪರೀಕ್ಷೆಗೂ ಸಮವಸ್ತ್ರ ನಿಯಮ ಅನ್ವಯವಾಗುತ್ತದೆ. ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಸಮವಸ್ತ್ರದಿಂದ ವಿನಾಯಿತಿ ಇರಲಿದೆ. ಆದರೆ, ಸಾಮಾನ್ಯ ಧಿರಿಸಿನಲ್ಲಿ ಪರೀಕ್ಷೆಗೆ ಹಾಜರಾಗುವವರು ಸರಕಾರ ಮತ್ತು ಹೈಕೋರ್ಟ್ ಆದೇಶಗಳನ್ನು ಪಾಲಿಸಬೇಕು’ ಎಂದು ಶಿಕ್ಷಣ ನಾಗೇಶ್ ಸೂಚನೆ ನೀಡಿದ್ದಾರೆ.

ಪರೀಕ್ಷೆಯು ಮೇ 18ಕ್ಕೆ ಮುಕ್ತಾಯಗೊಳ್ಳಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News