×
Ad

ಎ.23: ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಸ್ಥಳಾಂತರ

Update: 2022-04-22 17:22 IST

ಮಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಬಂಟ್ವಾಳ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಕಚೇರಿಯನ್ನು ಎ.23ರಂದು ಬಿ.ಸಿ.ರೋಡ್‌ನ ಭಾರತ್ ಕಮರ್ಷಿಯಲ್ ಕಾಂಪ್ಲೆಕ್ಸ್ ಕಟ್ಟಡದ ಕೆಳಗಿನ ಮಹಡಿಗೆ ಸ್ಥಳಾಂತರಿಸಲಾಗುತ್ತದೆ.

ವಿದ್ಯಾರ್ಥಿಗಳು ವಿಶೇಷವಾಗಿ ಅಲ್ಪಸಂಖ್ಯಾತರು ಇಲಾಖೆಯ ಮಾಹಿತಿ ಹಾಗೂ ಇತರ ಕಾರ್ಯಚಟುವಟಿಕೆಗಳಿಗೆ ಈ ಕಚೇರಿಯನ್ನು (ದೂ.ಸಂ: ೦೮೨೫೫-೨೩೨೪೭೦, ಮೊ.ಸಂ: ೮೩೧೦೩೫೭೯೮೫) ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News