ಕೆಪಿಎಸ್‍ಸಿ ನೇಮಕ ಆದೇಶ ಪತ್ರ ಕೊಡಲು ಸರಕಾರಕ್ಕೆ ಕೆಎಟಿ ಅನುಮತಿ

Update: 2022-04-22 13:30 GMT

ಬೆಂಗಳೂರು, ಎ.22: ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‍ಸಿ) 2011ನೆ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಯಲ್ಲಿ 362 ಅಭ್ಯರ್ಥಿಗಳ ಆಯ್ಕೆ ಸಿಂಧುಗೊಳಿಸುವುದಕ್ಕೆ ಸಂಬಂಧಿಸಿದ ಕರ್ನಾಟಕ ಸಿವಿಲ್ ಸೇವೆಗಳ(2011ನೆ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ) ಕಾಯ್ದೆಗೆ ತಡೆಯಾಜ್ಞೆ ನೀಡಲು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ(ಕೆಎಟಿ) ನಿರಾಕರಿಸಿದೆ. ಅಲ್ಲದೆ, ಅಂತಿಮ ಆದೇಶಕ್ಕೆ ಒಳಪಟ್ಟ ಷರತ್ತಿನೊಂದಿಗೆ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಪತ್ರ ವಿತರಣೆಗೆ ಅನುಮತಿ ನೀಡಿದೆ.

ಕಾಯ್ದೆಗೆ ತಡೆಯಾಜ್ಞೆ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಕೆಎಟಿ ಕೈಗೊಳ್ಳುವ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರಲಿದೆ ಎಂದು ಸ್ಪಷ್ಟಪಡಿಸಿದೆ. 

ಕೆಎಟಿ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸರಕಾರದ ಪರವಾಗಿ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್ ಪಿಐಎಲ್ ಅನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿರುವ ವಿಚಾರವನ್ನು ಕೆಎಟಿ ಗಮನಕ್ಕೆ ತಂದರು. ಅದನ್ನು ಪರಿಗಣಿಸಿದ ಪೀಠ, ಕಾಯ್ದೆಯ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಇಲ್ಲಿಗೆ ಕಾಯ್ದೆಗೆ ತಡೆ ನೀಡಲು ಆಗಲ್ಲ ಎಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News