ಕೊರೋನ ನಿಯಮ ಉಲ್ಲಂಘನೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ವಾರೆಂಟ್ ಜಾರಿ

Update: 2022-04-22 15:18 GMT

ಬೆಂಗಳೂರು, ಎ.22: ಕೊರೋನ ನಿಯಮಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇರೆಗೆ ಕೋರ್ಟ್ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ವಾರೆಂಟ್ ಜಾರಿ ಮಾಡಿದೆ. 

ಕೊರೋನ ನಿಯಮ ಉಲ್ಲಂಘಿಸಿ ರೈತರ ಪ್ರತಿಭಟನೆ, ಪೆಟ್ರೋಲ್-ಡೀಸಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದರಿಂದ ನ್ಯಾಯಾಲಯ ತಮಗೆ ವಾರೆಂಟ್ ಜಾರಿ ಮಾಡಿದೆ. ಹೀಗಾಗಿ, ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದೇನೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಖಂಡಿಸಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರಕರಣ ಕುರಿತಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ 36 ಜನರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

36 ಜನರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ 103 ಐಪಿಸಿ ಸೆಕ್ಷನ್ 341, 143ರ ಅಡಿ ಎಫ್‌ಐಆರ್ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News