ʼಖೇಲೋ ಇಂಡಿಯಾ-2021ʼ ಉದ್ಘಾಟನಾ ಸಮಾರಂಭಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಗಮನ
Update: 2022-04-23 10:07 IST
ಬೆಂಗಳೂರು : ಕ್ರೀಡಾ ವತ್ತು ಯುವ ಜನ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಖೇಲೋ ಇಂಡಿಯಾ - 2021 ವಿಶ್ವವಿದ್ಯಾಲಯ ಕ್ರೀಡೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಇಂದು ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಅವರನ್ನು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಮಯದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಸಚಿವರಾದ ಕೆ.ಸಿ.ನಾರಾಯಣಗೌಡ, ಲೋಕಸಭಾ ಸಂಸದ ಪಿ.ಸಿ.ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತರಾದ ಕಮಲ್ ಪಂಥ್, ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.