ಪುತ್ತೂರು : ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು
Update: 2022-04-23 16:13 IST
ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ತೋಟದಲ್ಲಿರುವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಸುಳ್ಯ ಪದವು ಸಮೀಪ ಶುಕ್ರವಾರ ತಡ ರಾತ್ರಿ ನಡೆದಿದೆ.
ಸುಳ್ಯಪದವು ನಿವಾಸಿ ತಿಮ್ಮಪ್ಪ ಗೌಡ ಎಂಬವರ ಪುತ್ರ ಇಲ್ಲಿನ ಸರ್ಕಾರಿ ಕಾಲೇಜು ವಿದ್ಯಾರ್ಥಿ ಧನುಷ್ (19) ಮೃತ ಯುವಕ. ಧನುಷ್ ರಾತ್ರಿ ತಮ್ಮ ತೋಟಕ್ಕೆ ಹೋಗಿದ್ದ ಸಂದರ್ಭ ತೋಟದಲ್ಲಿದ್ದ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.