×
Ad

ಆರೋಗ್ಯ ಕ್ಷೇತ್ರಕ್ಕೆ ಸರಕಾರದಿಂದ ಹೆಚ್ಚಿನ ಆದ್ಯತೆ: ಶೋಭಾ ಕರಂದ್ಲಾಜೆ

Update: 2022-04-23 18:29 IST

ಕುಂದಾಪುರ : ಪ್ರಸ್ತುತ ಕಾಲಘಟ್ಟದಲ್ಲಿ ಆರೋಗ್ಯದ ರಕ್ಷಣೆ, ಆರೋಗ್ಯದ ಕಾಳಜಿ ಎಲ್ಲರಲ್ಲಿಯೂ ಇರಬೇಕಾಗಿದೆ. ನಾವು ಆರೋಗ್ಯವಾಗಿದ್ದರೆ ನಮ್ಮ ಕುಟುಂಬ ನೆಮ್ಮದಿಯಿಂದ ಇರಬಹುದು. ಕೇಂದ್ರ ಹಾಗೂ ರಾಜ್ಯ ಸರಕಾರ ಕೊರೋನ ಅನಂತರದ ಕಾಲದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಜಿಲ್ಲಾ ಆಯುಷ್ ವಿಭಾಗ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಹಾಗೂ ರೋಟರಿ ಕ್ಲಬ್ ಮಿಡ್‌ಟೌನ್, ಲಯನ್ಸ್ ಕ್ಲಬ್, ಕುಂದಾಪುರ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಶನಿವಾರ ಕುಂದಾಪುರದ ಉಪವಿಭಾಗ ಸರಕಾರಿ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾದ ಕುಂದಾಪುರ ತಾಲೂಕು ಮಟ್ಟದ ಆರೋಗ್ಯ ಮೇಳ ಹಾಗೂ ಆರೋಗ್ಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕೇಂದ್ರ ಸರಕಾರವು ಬಡ ವರ್ಗದ ಜನರಿಗೆ ಅನುಕೂಲವಾಗಲು ಆಯು ಷ್ಮಾನ್ ಕಾರ್ಡ್‌ನಡಿ ೫ ಲಕ್ಷ ರೂ. ಚಿಕಿತ್ಸೆ ವೆಚ್ಚ ನೀಡುತ್ತಿದ್ದು, ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಈ ಕಾರ್ಡ್ ಮಾಡಿಸಿ, ಕಷ್ಟಕಾಲದಲ್ಲಿ ನೆರವಿಗೆ ಬರುತ್ತದೆ ಎಂದರು.

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಪೂಜಾರಿ, ಜಿಲ್ಲಾಕಾರಿ ಕೂರ್ಮಾರಾವ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಕಾರಿ ಡಾ.ನವೀನ್ ಭಟ್, ಸಹಾಯಕ ಆಯುಕ್ತ ಕೆ. ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಕಾರಿ ಡಾ.ನಾಗಭೂಷಣ ಉಡುಪ ಎಚ್., ತಾಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್ವರಿ ಮೊದಲಾದ ವರು ಉಪಸ್ಥಿತರಿದ್ದರು.

ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತ ಡಾ.ಪ್ರೇಮಾನಂದ, ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ತಜ್ಞ ಡಾ.ನಾಗೇಶ್ ಅವರನ್ನು ಗೌರವಿಸಲಾಯಿತು. ಆಸ್ಪತ್ರೆಯ ಆಡಳಿತ ಶಸ್ತ್ರ ಚಿಕಿತ್ಸಕ ವೈದ್ಯಾಧಿಕಾರಿ ಡಾ.ರಾಬರ್ಟ್ ರೆಬೆಲ್ಲೋ ಸ್ವಾಗತಿಸಿ, ಉಪನ್ಯಾಸಕ ಅಕ್ಷಯ್ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News