×
Ad

ಖೇಲೋ ಇಂಡಿಯಾ ಗೇಮ್ಸ್-2021: ಬ್ಯಾಸ್ಕೆಟ್ ಬಾಲ್ ಲೀಗ್ ಪಂದ್ಯಗಳಿಗೆ ಕ್ರೀಡಾ ಸಚಿವ ಡಾ.ನಾರಾಯಣಗೌಡ ಚಾಲನೆ

Update: 2022-04-23 18:44 IST

ಬೆಂಗಳೂರು, ಎ.23: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021 ಕ್ರೀಡಾಕೂಟದ ಬ್ಯಾಸ್ಕೆಟ್ ಬಾಲ್ ಲೀಗ್ ಪಂದ್ಯಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಚಾಲನೆ ನೀಡಿದ್ದಾರೆ.

ಶನಿವಾರ ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಬ್ಯಾಸ್ಕೆಟ್ ಬಾಲ್ ಲೀಗ್ ಪಂದ್ಯಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‍ನಲ್ಲಿ ಭಾಗವಹಿಸಲು ದೇಶದ ವಿವಿಧ ವಿಶ್ವವಿದ್ಯಾಲಯಗಳಿಂದ ಸುಮಾರು 36 ಬ್ಯಾಸ್ಕೆಟ್ ಬಾಲ್ ತಂಡಗಳು ಆಗಮಿಸಿದ್ದು, ಲೀಗ್ ಪಂದ್ಯಗಳು ಆರಂಭವಾಗಿವೆ' ಎಂದರು. ಬ್ಯಾಸ್ಕೆಟ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ, ಪರಿಷತ್ ಸದಸ್ಯ ಗೋವಿಂದರಾಜು ಈ ವೇಳೆ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News