ಮಂಗಳೂರು: ಚಿನ್ನ ಅಕ್ರಮ ಸಾಗಾಟ ಪತ್ತೆ
Update: 2022-04-23 22:22 IST
ಮಂಗಳೂರು : ದುಬೈಯಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಶನಿವಾರ ಪತ್ತೆ ಹಚ್ಚಿದ್ದಾರೆ.
ಶನಿವಾರ ದುಬೈಯಿಂದ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದಾಗ 24 ಕ್ಯಾರೆಟ್‌ನ ಸುಮಾರು 10,25,066 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಹಿಳೆಯರ ಹ್ಯಾಂಡ್‌ಬ್ಯಾಗ್‌ನ ಒಳಗೆ ಮರೆಮಾಚಿ ಸಾಗಾಟ ಮಾಡಲಾಗುತ್ತಿರುವುದನ್ನು ಪತ್ತೆ ಹಚ್ಚಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.