×
Ad

ಜಮ್ಮು-ಕಾಶ್ಮೀರ: ಪ್ರಧಾನಿ ರ್ಯಾಲಿ ಸ್ಥಳದಿಂದ 12 ಕಿ.ಮೀ.ದೂರದಲ್ಲಿ ಸ್ಫೋಟ

Update: 2022-04-24 12:33 IST

ಶ್ರೀನಗರ: ಜಮ್ಮು ಹಾಗೂ  ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿ ನಡೆಯುವ ಸ್ಥಳದಿಂದ 12 ಕಿ.ಮೀ. ದೂರದ ಮೈದಾನದಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

ಜಮ್ಮು ಜಿಲ್ಲೆಯ ಲಾಲಿಯಾನ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಫೋಟದ ಸ್ವರೂಪದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

"ಇದು ಭಯೋತ್ಪಾದನೆಗೆ ಸಂಬಂಧಿಸಿದೆ ಎಂದು ಕಂಡುಬಂದಿಲ್ಲ. ವಿವರಗಳನ್ನು ಕಂಡುಹಿಡಿಯಲಾಗುತ್ತಿದೆ" ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಇದಕ್ಕಾಗಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಜಮ್ಮು ವಿಭಾಗದ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್‌ನಲ್ಲಿ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ದೇಶಾದ್ಯಂತ ಗ್ರಾಮ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿ ಅವರು ಜಮ್ಮು-ಕಾಶ್ಮೀರದಲ್ಲಿ 20,000 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ  ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News