ಸಂಸದೆ ನವನೀತ್ ರಾಣಾ ವಿರುದ್ಧ ಎರಡನೇ ಎಫ್‌ಐಆರ್ ದಾಖಲಿಸಿದ ಮುಂಬೈ ಪೊಲೀಸ್

Update: 2022-04-24 07:34 GMT

ಮುಂಬೈ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದ ಹೊರಗೆ ಹನುಮಾನ್ ಚಾಲೀಸಾವನ್ನು ಪಠಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಂಸದೆ ನವನೀತ್ ರಾಣಾ ಹಾಗೂ  ಅವರ ಪತಿಯನ್ನು "ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಿದ" ಆರೋಪದ ಮೇಲೆ ಬಂಧಿಸಿದ ನಂತರ ಮುಂಬೈ ಪೊಲೀಸರು ಅವರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 353 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ರವಿವಾರ ರಾಣಾ ದಂಪತಿಯನ್ನು  ಬಾಂದ್ರಾದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಮುಂಬೈ ಪೊಲೀಸರು ಸಂಸದೆ-ಶಾಸಕ ದಂಪತಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರದೀಪ್ ಘರತ್ ಹೇಳಿದ್ದಾರೆ.

ನವನೀತ್ ರಾಣಾ ಅವರ ಪತಿ ರವಿ ರಾಣಾ ಅವರು ನ್ಯಾಯಾಲಯವನ್ನು ತಲುಪಿದಾಗ "ಉದ್ಧವ್ ಠಾಕ್ರೆ ಮುರ್ದಾಬಾದ್" ಎಂದು ಘೋಷಣೆಗಳನ್ನು ಕೂಗಿದರು.

ರಾಣಾ ವಿರುದ್ಧದ ಎಫ್‌ಐಆರ್‌ಗಳ ಕುರಿತು ಮಾತನಾಡಿದ ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, “ಹನುಮಾನ್ ಚಾಲೀಸಾ ಪಠಿಸುವ ನೆಪದಲ್ಲಿ ಎರಡು ಗಲಭೆಗಳನ್ನು ಪ್ರಚೋದಿಸುವ ಘಟನೆಗಳು ನಡೆದಿದ್ದು, ರಾಷ್ಟ್ರಪತಿ ಆಳ್ವಿಕೆ ಹೇರುವ ವಾತಾವರಣವನ್ನು ನಿರ್ಮಿಸಲಾಗುತ್ತಿದೆ.  ಹೀಗಾಗಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ'' ಎಂದು ಹೇಳಿದರು.

ಲೋಕಸಭೆ ಸಂಸದೆ ನವನೀತ್ ರಾಣಾ ಹಾಗೂ  ಅವರ ಪತಿ, ಪಕ್ಷೇತರ ಶಾಸಕ ರವಿ ರಾಣಾ ಅವರು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರೀ ಮುಂದೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಬೆದರಿಕೆ ಹಾಕಿದ್ದರು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ಮುಂಬೈ ಭೇಟಿಯನ್ನು ಉಲ್ಲೇಖಿಸಿ ಅವರು ಶನಿವಾರ ಪ್ರತಿಭಟನೆಯನ್ನು ಹಿಂಪಡೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News