×
Ad

ದ.ಕ. ಜಿಲ್ಲೆಯಲ್ಲಿ ಸಾಧಾರಣ ಮಳೆ

Update: 2022-04-24 20:06 IST

ಮಂಗಳೂರು : ದ.ಕ.ಜಿಲ್ಲೆಯ ಕೆಲವು ಕಡೆ ರವಿವಾರ ಸಾಧಾರಣ ಮಳೆಯಾಗಿದೆ. ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಬಳಿಕ ಅಲ್ಲಲ್ಲಿ ಮಳೆಯಾಗಿದೆ. ಸಂಜೆಯವರೆಗೂ ಮೋಡ ಕವಿದ ವಾತಾವರಣ ಮುಂದುವರಿದಿತ್ತು. ಮೋಡ ಕವಿದ ವಾತಾವರಣವಿದ್ದರೂ ಸೆಕೆಯ ತೀವ್ರತೆ ಹೆಚ್ಚಿತ್ತು.

ಜಿಲ್ಲೆಯ ಮಂಗಳೂರು, ಬೆಳ್ತಂಗಡಿ, ಸುಳ್ಯ, ಪುತ್ತೂರು ತಾಲೂಕಿನ ಕೆಲವು ಕಡೆ ಮಳೆಯಾಗಿದೆ. ಸಂಜೆ ಗುಡುಗು ಸಹಿತ ಮಳೆ ಸುರಿದಿದೆ. ದಿನದ ಗರಿಷ್ಠ ತಾಪಮಾನ 33.7 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 26.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹಮಾಮಾನ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News