×
Ad

ಅಕ್ಷಯ ಶೆಟ್ಟಿಗೆ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ಪ್ರದಾನ

Update: 2022-04-24 21:04 IST

ಉಡುಪಿ : ತುಳುಕೂಟ ಉಡುಪಿ ವತಿಯಿಂದ ಸ್ವಾತಂತ್ರ್ಯ ಹೋರಾಟ ಗಾರ ದಿ.ಶ್ರೀನಿವಾಸ ಉಪಾಧ್ಯಾಯ ಪಣಿಯಾಡಿ ಸ್ಮರಣಾರ್ಥ ನೀಡಲಾಗುವ ೨೭ನೇ ವರ್ಷದ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ-೨೦೨೧ನ್ನು ‘ದೆಂಗ’ ತುಳು ಕಾದಂಬರಿ ಲೇಖಕಿ, ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕಿ ಪ್ರೊ.ಅಕ್ಷಯ ಆರ್.ಶೆಟ್ಟಿ ಪೆರಾರ ಅವರಿಗೆ ಉಡುಪಿ ಕಿದಿಯೂರು ಹೊಟೇಲಿನ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು.

ಸಮಾರಂಭವನ್ನು ಉದ್ಘಾಟಿಸಿದ ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಮಾತ ನಾಡಿ, ತುಳು ಆಚರಣೆ ವಿಶಿಷ್ಟ ವಾಗಿದ್ದು, ಸಂಸ್ಕೃತಿ ಕಟ್ಟುವ ಮತ್ತು ಸಂಬಂಧಗಳನ್ನು ಗಟ್ಟಿಗೊಳಿಸುವ ಕಾರ್ಯಕ್ಕೆ ಒತ್ತು ನೀಡಲಾಗಿದೆ. ಭಾವನಾತ್ಮಕತೆಯಲ್ಲಿ ಬದುಕು ಕಟ್ಟಿಕೊಂಡಿದ್ದ ತುಳುವರು ಪ್ರಕೃತಿ ಆರಾಧಕರು ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ತುಳುಕೂಟ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ವಹಿಸಿದ್ದರು.  ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ, ತುಳು ಜಾನಪದ ವಿದ್ವಾಂಸ ಕೆ.ಎಲ್.ಕುಂಡಂತಾಯ, ಉದ್ಯಮಿ ವಿಶ್ವನಾಥ ಶೆಣೈ, ತುಳುಕೂಟದ ಸಂಚಾಲಕಿ ತಾರಾ ಉಮೇಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಖಜಾಂಚಿ ಚೈತನ್ಯ ಎಂ.ಜಿ., ಮನೋರಮಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News