×
Ad

ದಿಟ್ಟ ನಿರ್ಧಾರವನ್ನು ಕೈಗೊಳ್ಳುವ ಮೂಲಕ ಸರ್ವಜನಾಂಗದ ಶಾಂತಿಯ ತೋಟವನ್ನು ಉಳಿಸಬೇಕಿದೆ: ಕುಮಾರಸ್ವಾಮಿ

Update: 2022-04-24 21:21 IST

ಮೈಸೂರು: ಸರ್ವಜನಾಂಗದ ಶಾಂತಿಯ ತೋಟವನ್ನು ಕೆಲವರು ಕೆಡಿಸಲು ಪ್ರಯತ್ನ ಪಡುತ್ತಿದ್ದು ಅದಕ್ಕೆ ಅವಕಾಶ ನೀಡದೆ ಮುಂದಿನ ದಿನಗಳಲ್ಲಿ ದಿಟ್ಟ ನಿರ್ಧಾರವನ್ನು  ಕೈಗೊಳ್ಳುವ ಮೂಲಕ ಶಾಂತಿಯ ತೋಟವನ್ನು ಉಳಿಸಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ನಗರದ ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಮಿಲನ್ ಫಂಕ್ಷನ್ ಹಾಲ್ ನಲ್ಲಿ ರವಿವಾರ ಮುಸ್ಲಿಮ್ ಭಾಂದವರಿಗೆ  ಜೆಡಿಎಸ್ ಪಕ್ಷದ ವತಿಯಿಂದ ಆಯೋಜಿಸಿದ್ದ   ಇಫ್ತಿಯಾರ್ ಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕೆಲವರು ಶಾಂತಿಯನ್ನು ಕೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ಯಾರೂ ಅವಕಾಶ ಕೊಡಬಾರದು. ಹಿಂದೂ-ಮುಸ್ಲಿಮ್ ಎಲ್ಲರೂ ಒಂದೇ ಆದರೆ ಕೆಲವರು ಬೇರ್ಪಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಅದಕ್ಕೆ ಯಾರೂ ತಲೆಕೆಡಿಸಿಕೊಳ್ಳದೆ ಶಾಂತಿಯಿಂದ ಇರಿ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ಹೇಳಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಾತನಾಡಿ, ಮುಸ್ಲಿಮ್ ಸಮುದಾಯ ಎಂದೂ ಶಾಂತಿಯ ತೋಟವನ್ನು ಭಯಸುತ್ತದೆ ಹೊರತು ಅಶಾಂತಿಯನ್ನಲ್ಲ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸುಮಾರು 45 ವರ್ಷಗಳಿಂದಲೂ ಮುಸಲ್ಮಾನರಿಗೆ  ಇಫ್ತಾರ್ ಕೂಟ ಆಯೋಜನೆ ಮಾಡುತ್ತಿದ್ದಾರೆ.‌ಜೊತೆಗೆ ಸ್ವಾಮೀಜಿಗಳು ಇಫ್ತಾರ್ ಕೂಟ ಮಾಡುತ್ತಿದ್ದಾರೆ. ಆದರೆ ಕೆಲವರು ಬೇಕಂತಲೇ ಗೊಂದಲ ಉಂಟುಮಾಡುತ್ತಿದ್ದಾರೆ. ಹಾಗಾಗಿ ಮುಸ್ಲಿಮ್ ಬಂಧುಗಳು ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳದೆ ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಲು ಸಹಕರಿಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಶಾಸಕ ಸಾ.ರಾ.ಮಹೇಶ್, ಅಶ್ವಿನ್ ಕುಮಾರ್, ಅಬ್ದುಲ್ಲಾ, ಕಿಂಗ್ ನಜೀರ್, ಕೆ.ವಿ.ಮಲ್ಲೇಶ್, ಶಫಿ,  ಆರ್.ಲಿಂಗಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News