×
Ad

ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ಸಿಐಡಿ ನೋಟಿಸ್

Update: 2022-04-24 23:11 IST

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಶಾಸಕ ಪ್ರಿಯಾಂಕ್‌ ಖರ್ಗೆಗೆ ಸಿಐಡಿ ಪೊಲೀಸರು ನೋಟಿಸ್‌ ನೀಡಿ ಹಾಜರಾಗುವಂತೆ ತಿಳಿಸಿದ್ದಾರೆ.

ಪಿಎಸ್‌ಐ ಅಕ್ರಮ ಪ್ರಕರಣ ಕುರಿತು ಇತ್ತೀಚೆಗ ಶಾಸಕ ಪ್ರಿಯಾಂಕ್‌ ಖರ್ಗೆ ಮಾಧ್ಯಮಗಳಿಗೆ ಆಡಿಯೋ , ವಿಡಿಯೋ ದಾಖಲೆ ಬಿಡುಗಡೆ ಮಾಡಿದ್ದರು. 

ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮಗಳು ನಡೆದಿವೆ ಎಂಬುದಕ್ಕೆ ತಮ್ಮ ಬಳಿ ಸಾಕ್ಷ್ಯಾಧಾರಗಳಿರುವುದಾಗಿ ಮಾಧ್ಯಮಕ್ಕೆ ಮಾಹಿತಿ ನೀಡಿರುತ್ತೀರಿ. ಈ ಪ್ರಕರಣವು ಸೂಕ್ಷ್ಮ ತುಂಬಾ ಗಂಭೀರ ಪ್ರಕರಣವಾಗಿರುವುದರಿಂದ ಲಭ್ಯವಿರುವ ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿ ತ್ವರಿತಗತಿಯಲ್ಲಿ ತನಿಖೆ ಮಾಡುವುದು ಅತ್ಯವಶ್ಯಕವಾಗಿದೆ. ಆದ್ದರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿಯಿರುವ ಮಾಹಿತಿಗಳನ್ನು ದಿನಾಂಕ 25ರಂದು ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಸಿಐಡಿ ಕಚೇರಿಗೆ ಹಾಜರಾಗಿ ಸಾಕ್ಷಿಗಳನ್ನು ಒದಗಿಸುವಂತೆ ಈ ಮೂಲಕ ತಮಗೆ ಸೂಚಿಸಿದೆ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಮಾಹಿತಿ ನೀಡುವಂತೆ ನೋಟಿಸ್‌ ನೀಡಲಾಗಿದ್ದು ಸೋಮವಾರ ಮಧ್ಯಾಹ್ನ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News