ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದ ಪ್ರಿಯಾಂಕ್ ಖರ್ಗೆ ಬೆನ್ನಹಿಂದೆ ಕಾಂಗ್ರೆಸ್ ಪಕ್ಷ ಇದೆ: ಸಿದ್ದರಾಮಯ್ಯ

Update: 2022-04-25 07:18 GMT

ಬೆಂಗಳೂರು: ಪಿಎಸ್ಐ ನೇಮಕ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದ ಶಾಸಕ ಪ್ರಿಯಾಂಕ್ ಖರ್ಗೆಯವರನ್ನೇ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸುತ್ತಿರುವ ಸಚಿವ ಸುನೀಲ್ ಕುಮಾರ್ ಸ್ಥಿತಿ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ. ಈ ಬೆದರಿಕೆಗೆ ನಾವು ಜಗ್ಗುವುದಿಲ್ಲ. ಖರ್ಗೆಯವರ ಬೆನ್ನಹಿಂದೆ ಕಾಂಗ್ರೆಸ್ ಪಕ್ಷ ಇದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ' ಸಚಿವ ಸುನೀಲ್ ಕುಮಾರ್ ನೀಡಿದ ಹೇಳಿಕೆಯ ಬೆನ್ನಿನಲ್ಲಿಯೇ ಸಿಐಡಿ ಪೊಲೀಸರು ಪ್ರಿಯಾಂಕ ಖರ್ಗೆ ಅವರ ವಿಚಾರಣೆಗೆ ನೋಟೀಸ್ ನೀಡಿದ್ದನ್ನು ನೋಡಿದರೆ, ಬಿಜೆಪಿ ನಾಯಕರು ಹಗರಣದ ಬಗ್ಗೆ ಮಾತನಾಡುವವರ ಬಾಯಿಮುಚ್ಚಿಸುವ ಹುನ್ನಾರ ನಡೆಸುತ್ತಿರುವಂತೆ  ಕಾಣುತ್ತಿದೆ' ಎಂದು ಹೇಳಿದ್ದಾರೆ.

ಇದನ್ನೂ ಓದಿ... ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ಸಿಐಡಿ ನೋಟಿಸ್

'ಅಡಿಯಿಂದ ಮುಡಿವರೆಗೆ 100% ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ರಾಜ್ಯದ ಬಿಜೆಪಿ ಸರ್ಕಾರವನ್ನು ಸುಳ್ಳುಗಳ ಬಣ್ಣಹೊಡೆದು ಅಳಿಸಲಾಗದು. ಸರ್ಕಾರ, ತನಿಖಾ ಸಂಸ್ಥೆಗಳು ನಿಮ್ಮ ನಿಯಂತ್ರಣದಲ್ಲಿರಬಹುದು, ರಾಜ್ಯದ ಜನತೆ ನಮ್ಮ ಜೊತೆ ಇದ್ದಾರೆ' ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News