ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ, ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಿ ಸರ್ಕಾರದ ಅದೇಶ
Update: 2022-04-25 20:20 IST
ಬೆಂಗಳೂರು: ಕೋವಿಡ್ 4ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ ನಡೆಸಿದ್ದು, ಕೆಲವೊಂದು ಕೋವಿಡ್ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಎ. 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಎಲ್ಲ ರಾಜ್ಯಗಳ ಸಿಎಂಗಳ ಸಭೆ ನಡೆಸಲಿದ್ದು, ಅದಕ್ಕೂ ಮುನ್ನ ಇದೀಗ ಇಂದಿನ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಮಾಹಿತಿ ಸಂಗ್ರಹಿಸಿರುವ ಸಿಎಂ ಬೊಮ್ಮಾಯಿ, ಮಾರ್ಗ ಸೂಚಿ ಪ್ರಕಟಿಸಿದ್ದಾರೆ.
ಹೊಸ ಮಾರ್ಗ ಸೂಚಿಗಳು
-ಸಾರ್ವಜನಿಕ ಸ್ಥಳಗಳಲ್ಲಿ, ಕರ್ತವ್ಯದ ಸ್ಥಳಗಳಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.
-ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ ವಿಧಿಸಲಾಗುತ್ತದೆ.
-ಪ್ರಯಾಣದ ವೆಳೆಯೂ ಮಾಸ್ಕ್ ಕಡ್ಡಾಯವಾಗಿದೆ.
-ಇದಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ವ್ಯಕ್ತಿಗಳು 2 ಅಡಿ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಬೇಕು.