ಜವಾಬ್ದಾರಿ ಅರಿತು ಕೆಲಸ ನಿರ್ವಹಿಸದರೆ ಉತ್ಕೃಷ್ಟ ಹಾಗೂ ಶ್ರೇಷ್ಠ ಭಾರತ ಕಟ್ಟಲು ಸಾಧ್ಯ: ಥಾವರ್ ಚಂದ್ ಗೆಹ್ಲೋಟ್
ಮೈಸೂರು,ಎ.25: ಆತ್ಮ ನಿರ್ಭರ ಭಾರತ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬ ಪ್ರಜೆಯೂ ಕೂಡ ತನ್ನ ಜವಾಬ್ದಾರಿಯನ್ನು ಅರಿತು ಕೆಲಸ ನಿರ್ವಹಿಸಿದಾಗ ಮಾತ್ರ ಉತ್ಕೃಷ್ಟ ಹಾಗೂ ಶ್ರೇಷ್ಠ ಭಾರತವನ್ನು ಕಟ್ಟಲು ಸಾಧ್ಯ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಘಟಿಕೋತ್ಸವ ಭವನದಲ್ಲಿ ಸೋಮವಾರ ವಿಶ್ವವಿದ್ಯಾನಿಲಯದ ಹದಿನೇಳನೆ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿಶ್ವವಿದ್ಯಾನಿಲಯವು ಸಾಮಥ್ರ್ಯ ರಾಷ್ಟ್ರೀಯ ಜವಾಬ್ದಾರಿಯ ಜೊತೆಜೊತೆಗೆ ಎಲ್ಲರಿಗೂ ಎಲ್ಲಾ ಕಡೆಯಲ್ಲೂ ಉನ್ನತ ಶಿಕ್ಷಣವನ್ನು ನೀಡುತ್ತಿರುವುದು ಪ್ರಶಂಸನೀಯವಾಗಿದೆ. ಗುರುಗಳ ಮಾರ್ಗದರ್ಶನ ತಂದೆ-ತಾಯಿ ಪರಿವಾರ ಸಹಯೋಗದಿಂದ ವಿದ್ಯಾರ್ಥಿಗಳು ಸಾಧನೆಯ ಮಟ್ಟ ಮುಟ್ಟಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ ಸಮಾಜ ಹಾಗೂ ಪೆÇೀಷಕರಿಗೆ ಗೌರವ ತಂದು ಕೊಡಬೇಕು ಎಂದು ಅವರು ತಿಳಿಸಿದರು.
ಇಂದು ನಾವು ಆನಂದ್ ಸಂಕೇಶ್ವರ್ ಜಿ, ಡಾ. ಎವಿಎಸ್ ಮೂರ್ತಿ ಮತ್ತು ಇಎಸ್ ಚಕ್ರವರ್ತಿ ಅವರು ಮಾಡಿದ ಗಮನಾರ್ಹ ಮತ್ತು ಅಮೂಲ್ಯವಾದ ಕೆಲಸಕ್ಕಾಗಿ ಗೌರವ ಪದವಿಗಳನ್ನು ನೀಡಲಾಗಿದೆ. ನಿಮ್ಮೆಲ್ಲರಿಗೂ ಅಭಿನಂದನೆಗಳು ಮತ್ತು ಶುಭಾಶಯಗಳು ಎಂದು ತಿಳಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಇಂದು ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು ಮತ್ತು ನಿಮ್ಮ ಉಜ್ವಲ ಭವಿಷ್ಯವನ್ನು ಹಾರೈಸುತ್ತೇನೆ ಎಂದರು.
ವಿವಿಧ ವಿಷಯಗಳಲ್ಲಿ ಪದವಿ ಪಡೆದ 8,338 ಅಭ್ಯರ್ಥಿಗಳಿಗೆ ಪದವಿ ಪ್ರದಾನಿಸಲಾಯಿತು. ಇದರಲ್ಲಿ 3,272 ಪುರುಷರು ಮತ್ತು 5,066 ಮಹಿಳಾ ಅಭ್ಯರ್ಥಿಗಳು ಇದ್ದಾರೆ. 31 ಮಂದಿಗೆ ಪಿಹೆಚ್ ಡಿ ಪದವಿ ಪ್ರದಾನ ಮಾಡಲಾಯಿತು. 48 ಅಭ್ಯರ್ಥಿಗಳಿಗೆ ಚಿನ್ನದ ಪದಕ, 38 ಅಭ್ಯರ್ಥಿಗಳಿಗೆ ನಗದು ಬಹುಮಾನ ಪ್ರದಾನ ಮಾಡಲಾಯಿತು.
ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಗೌರವಾನ್ವಿತ ಕಾರ್ಯದರ್ಶಿ ಎ.ವಿ.ಎಸ್.ಮೂರ್ತಿ, ಟಾಟಾ ಗ್ಲೋಬಲ್ ಸಂಪನ್ಮೂಲ ನಿರ್ವಹಣಾ ಸಂಸ್ಥೆಯ ಉಪಾಧ್ಯಕ್ಷ ಈ.ಎಸ್.ಚಕ್ರವರ್ತಿ, ವಿಆರ್ ಎಲ್ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸಂಕೇಶ್ವರ್ ಇವರುಗಳಿಗೆ ಗೌರವ ಡಾಕ್ಟರೇಟ್ ಪ್ರದಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕರಾಮುವಿ ಕುಲಪತಿ ಡಾ.ಎಸ್.ವಿದ್ಯಾಶಂಕರ್, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಎ.ಬಿ.ಬಸವರಾಜ್ ಕುಲಸಚಿವ ಡಾ.ರಾಜಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.