×
Ad

ಬಜ್ಪೆ ಪೊಲೀಸ್ ಇನ್ಸ್ಪೆಕ್ಟರ್ ಸಹಿತ ನಾಲ್ವರ ಅಮಾನತು: ಅಸಮಾಧಾನ ವ್ಯಕ್ತಪಡಿಸಿದ ಯು.ಟಿ.ಖಾದರ್

Update: 2022-04-25 23:35 IST

ಮಂಗಳೂರು: ಯಾವುದೇ ತನಿಖೆ ಮಾಡದೆ ಬಜ್ಪೆ ಪೋಲಿಸರನ್ನು ಅಮಾನತುಗೊಳಿಸಿದ ಬಗ್ಗೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಜ್ಪೆ ಪೋಲಿಸ್ ಠಾಣೆಯ ಓರ್ವ ಇನ್ ಸ್ಪೆಕ್ಟರ್ ಹಾಗೂ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಬಗ್ಗೆ ಮಾಜಿ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಾಮಾಣಿಕ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ಇಂಥಹ ಘಟನೆಗಳು ಕೆಲವು ಸಮಾಜದ್ರೋಹಿ ಶಕ್ತಿಗಳು ಬೇಕಾಬಿಟ್ಟಿ ಮಾತನಾಡಲು ಹಾಗೂ ಕಾನೂನು ಕೈಗೆತ್ತಿಕೊಳ್ಳಲು ಪ್ರೇರಣೆಯಾಗುತ್ತದೆ. ಈ ಸರಕಾರ ಅಧಿಕಾರಿಗಳನ್ನು ಪ್ರಾಮಾಣಿಕವಾಗಿ ಕೆಲಸ ಮಾಡಲು ಬಿಡದೆ ಇರುವುದು ಬಹಳ ದುರಂತ ಎಂದು ಯು.ಟಿ.ಖಾದರ್ ಅವರು ಪತ್ರಿಕಾ ಪ್ರಕಟನೆಯ ಮೂಲಕ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.‌

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News