ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಪುಗಳನ್ನು ನಿಷೇಧಿಸುವಂತೆ ಸಲ್ಲಿಸಿದ ಅರ್ಜಿ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

Update: 2022-04-26 07:59 GMT

ಚೆನ್ನೈ: ಶಾಲೆಗಳಲ್ಲಿ ವಿದ್ಯಾರ್ಥಿಗಳು ಧಾರ್ಮಿಕ ಉಡುಪು ಧರಿಸುವುದನ್ನು ನಿಷೇಧಿಸಬೇಕು ಎಂದು ತಮಿಳುನಾಡಿನ ಹಿಂದೂ ಮುನ್ನೇತ್ರ ಕಳಗಂ ಸದಸ್ಯ ಕೆ ಗೋಪಿನಾಥ್ ಸಲ್ಲಿಸಿದ್ದ ಮನವಿಯನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. 

ನ್ಯಾಯಮೂರ್ತಿಗಳಾದ ಎಂ.ದುರೈಸ್ವಾಮಿ ಮತ್ತು ಟಿ.ವಿ.ತಮಿಳ್ಸೆಲ್ವಿ ಅವರ ಎರಡನೇ ವಿಭಾಗೀಯ ಪೀಠವು ಈ ವಿಷಯವನ್ನು ಸುಪ್ರೀಂ ಕೋರ್ಟ್ ವಶಪಡಿಸಿಕೊಂಡಿದೆ ಮತ್ತು ಆದ್ದರಿಂದ ಪ್ರಸ್ತುತ ಅಂತಹ ಪಿಐಎಲ್ ಅನ್ನು ಹೈಕೋರ್ಟ್ ಪುರಸ್ಕರಿಸುವುದು ಸೂಕ್ತವಲ್ಲ ಎಂದು ಸೂಚಿಸಿದ್ದಾರೆ. ಬಳಿಕ, ಅರ್ಜಿದಾರರು ತಮ್ಮ ವಕೀಲರ ಮೂಲಕ ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ.

ವಿದ್ಯಾರ್ಥಿಗಳಲ್ಲಿ ಅಸಮಾನತೆಯನ್ನು ಸೃಷ್ಟಿಸಲು ಹಲವಾರು ಸ್ಥಳಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್‌ನಂತಹ ಧಾರ್ಮಿಕ ಉಡುಪುಗಳನ್ನು ಧರಿಸುತ್ತಿದ್ದಾರೆ ಎಂದು ಅರ್ಜಿದಾರರು ಅರ್ಜಿಯಲ್ಲಿ ಹೇಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News