×
Ad

ತಾಕತ್ತಿದ್ದರೆ ನಮಗೆ ನೋಟಿಸ್ ನೀಡಿ ಎನ್ನುವ ನಿಮ್ಮ ವಿರುದ್ಧವಿರುವ ಪ್ರಕರಣಗಳೆಷ್ಟು ಗೊತ್ತೇ:ಡಿಕೆಶಿಗೆ ಬಿಜೆಪಿ ಪ್ರಶ್ನೆ

Update: 2022-04-26 13:48 IST

ಬೆಂಗಳೂರು: ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕುರಿತು ಕಾಂಗ್ರೆಸ್ -ಬಿಜೆಪಿ ನಾಯಕರ ಮಧ್ಯೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ,  'ತಾಕತ್ತಿದ್ದರೆ ನಮಗೆ ನೋಟಿಸ್ ನೀಡಿ ಎಂದು ಸವಾಲೆಸೆದಿರುವ ಡಿ.ಕೆ ಶಿ ವಕುಮಾರ್ 
ಅವರೇ, ನಿಮ್ಮ ವಿರುದ್ಧವಿರುವ ಪ್ರಕರಣಗಳು ಎಷ್ಟು ಗೊತ್ತೇ? ಎಷ್ಟು ಪ್ರಕರಣದಲ್ಲಿ ಬೇಲ್ ಪಡೆದಿದ್ದೀರಿ, ಯಾವ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದೀರಿ ಎಂದು ವಿವರಿಸುವಿರಾ? ನೀವು ತಿಹಾರ್ ಜೈಲು ವಾಸ ಮಾಡಿದ್ದು ಸ್ವಾತಂತ್ರ್ಯ ಹೋರಾಟಕ್ಕಾಗಿಯೇ?' ಎಂದು ಪ್ರಶ್ನಿಸಿದೆ. 

'ನೇಮಕಾತಿ ಅಕ್ರಮದ ಕುರಿತಂತೆ ಆರಂಭದಿಂದಲೂ ತನಿಖಾಧಿಕಾರಿಯಂತೆ ವರ್ತಿಸಿದ ಪ್ರಿಯಾಂಕ್ ಖರ್ಗೆ ಅವರು ಈಗ ವಿಚಾರಣೆಗೆ ಕರೆದಾಗ ಸೊಬಗನಂತೆ ವರ್ತಿಸುತ್ತಿದ್ದಾರೆ. ಇದೆಲ್ಲಾ ಅಕ್ರಮದಲ್ಲಿ ಭಾಗಿಯಾಗಿರುವ ಖರ್ಗೆ ಮನೆತನದ ಅತ್ಯಾಪ್ತರನ್ನು ರಕ್ಷಿಸಲು ಮಾಡುತ್ತಿರುವ ನವರಂಗಿ ಆಟವಲ್ಲದೆ ಮತ್ತೇನು?' ಎಂದು ವಾಗ್ದಾಳಿ ನಡಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News