×
Ad

ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ: ಡಿಕೆಶಿ ಜೊತೆಗಿದ್ದ ದಿವ್ಯಾ ಹಾಗರಗಿ ಫೋಟೊ ಪೋಸ್ಟ್ ಮಾಡಿದ ಬಿಜೆಪಿ

Update: 2022-04-26 15:24 IST

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿಯ ಅಕ್ರಮ‌ ಆರೋಪ ಎದುರಿಸುತ್ತಿರುವ ದಿವ್ಯಾ ಹಾಗರಗಿ ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಅವರ ಜೊತೆ ನಿಂತಿದ್ದ ಫೋಟೊ ಒಂದನ್ನು ಇದೀಗ ಬಿಜೆಪಿ ಕರ್ನಾಟಕ ತನ್ನ ಅಧಿಕೃತ  ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಚರ್ಚೆಗೆ ಗ್ರಾಸವಾಗಿದೆ. 

ಇತ್ತೀಚೆಗೆ ಅದೇ ದಿವ್ಯಾ ಹಾಗರಗಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆ ನಿಂತಿದ್ದ ಫೋಟೊ ಕಾಂಗ್ರೆಸ್ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿತ್ತು. ಅಲ್ಲದೇ 'ದಿವ್ಯಾ ಹಾಗರಗಿ ಅವರ ಜೊತೆ ಆತ್ಮೀಯತೆ ಹೊಂದಿರುವಾಗ ನ್ಯಾಯಯುತ ತನಿಖೆಯನ್ನು ನಿರೀಕ್ಷಿಸಲು ಸಾಧ್ಯವೇ?' ಎಂದು ಕಾಂಗ್ರೆಸ್ ಬಿಜೆಪಿಗೆ ಪ್ರಶ್ನೆ ಮಾಡಿತ್ತು. 

ಇದೀಗ ಕಾಂಗ್ರಸ್ ಅನ್ನು ತರಾಟೆಗೆ ತೆಗೆದುಕೊಂಡಿರುವ ಬಿಜೆಪಿ, ' ಪಿಎಸ್ಐ ನೇಮಕ ಹಗರಣ ಕಾಂಗ್ರೆಸ್ ಕೃಪಾಪೋಷಿತರ ನಾಟಕ ಮಂಡಳಿಯ ಟೂಲ್ ಕಿಟ್ ಎಂದು ಸಾರಿ ಸಾರಿ ಹೇಳುವುದಕ್ಕೆ ಸಾಕ್ಷ್ಯ ಇಲ್ಲಿದೆ. ಅಧಿಕಾರದಲ್ಲಿ ಇಲ್ಲದೇ ಇದ್ದರೂ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವನ್ನು ತುರುಕುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಮಾತ್ರ ಸಾಧ್ಯ!' ಎಂದು ಟೀಕಿಸಿದೆ. 

ಹಾಗರಗಿಗೆ ಸೇರಿದ್ದ ಜ್ಞಾನಜ್ಯೋತಿ ಇಂಗ್ಲಿಷ್​ ಮೀಡಿಯಂ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ತಲೆಮರೆಸಿಕೊಂಡಿರುವ ದಿವ್ಯಾ ಹಾಗರಗಿ ಹಾಗೂ ಈಕೆಯ ಸಹಚರರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News